ಮಡಿಕೇರಿ, ಜು. ೧೨: ಕಾನ್ವೆಂಟ್ ಜಂಕ್ಷನ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯಾಣಿಕರ ಬಸ್ ತಂಗುದಾಣವನ್ನು ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ತಾರೀಕು ೧೧ರಂದು ಉದ್ಘಾಟಿಸಿದರು.
ನಗರಸಭಾ ಸದಸ್ಯ ಅರುಣ್ ಶೆಟ್ಟಿ ಅವರ ಪ್ರಯತ್ನದಲ್ಲಿ ನಿರ್ಮಾಣಗೊಂಡ ನೂತನ ತಂಗುದಾಣ ಉದ್ಘಾಟನಾ ಸಂದರ್ಭ ನಗರಸಭಾ ಸದಸ್ಯ ಉಮೇಶ್ ಸುಬ್ರಮಣಿ, ಮಾಜಿ ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ಮಾಜಿ ಸದಸ್ಯ ಉಣ್ಣಿಕೃಷ್ಣ, ಶಕ್ತಿ ಪತ್ರಿಕಾ ಸಂಪಾದಕ ಜಿ. ಚಿದ್ವಿಲಾಸ್, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮೇದಪ್ಪ, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.
ಸ್ಥಳಕ್ಕೆ ಭೇಟಿ ನೀಡಿದ ಮೂಡ ಅಧ್ಯಕ್ಷ ಬಿ.ವೈ. ರಾಜೇಶ್ ಹಾಗೂ ನಗರಸಭಾ ಸದಸ್ಯ ಮುಸ್ತಫ ಅವರು ಅರುಣ್ ಶೆಟ್ಟಿ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.