ಭಾಗಮಂಡಲ, ಜು. ೧೨: ಬಲಿಷ್ಠ ಭಾರತ ಹಾಗೂ ಆದರ್ಶ ಸಮಾಜ ನಿರ್ಮಾಣ ಮಾಡಲು ಎಲ್ಲರ ಕೊಡುಗೆ ಅಗತ್ಯ. ಈ ನಿಟ್ಟಿನಲ್ಲಿ ಕಾರ್ಯಕರ್ತರೂ ಕೂಡ ಕಾರ್ಯಪ್ರವೃತ್ತರಾಗಬೇಕು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಮಮಟ್ಟದ ಬೂತ್ಗಳಿಗೆ ಭೇಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಗ್ರಾಮೀಣ ರಸ್ತೆಗಳು ಹಾಳಾಗಿವೆ. ರಸ್ತೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸ ಲಾಗುವುದು ಎಂದ ಅವರು, ರಾಜ್ಯ ಸರ್ಕಾರ ಜನಸಾಮಾನ್ಯರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಕೆ.ಜಿ. ಬೋಪಯ್ಯ , ಅಪ್ಪಚ್ಚು ರಂಜನ್, ಮನು ಮುತ್ತಪ್ಪ, ರವಿ ಕಾಳಪ್ಪ, ಕಾಂಗೀರ ಸತೀಶ್, ನಾಗೇಶ್ ಕುಂದಲ್ಪಾಡಿ, ಪಿ.ಎಂ. ರವಿ, ರಾಬಿನ್ ದೇವಯ್ಯ, ಕೋಡಿ ಪೊನ್ನಪ್ಪ, ಹೊಸೂರು ಸತೀಶ್ ಕುಮಾರ್, ಮಡಿಕೇರಿ ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ, ಕುದುಪಜೆ ಕುಲದೀಪ್ ಉಪಸ್ಥಿತರಿದ್ದರು.