ಸಿದ್ದಾಪುರ, ಜು. ೧೨: ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೇ ೨೧ರಂದು ಬಾಡಗ ಬಾಣಂಗಾಲ ಗ್ರಾಮದ ಹುಂಡಿಯ ನಿವಾಸಿ ಗ್ರಾಮ ಪಂಚಾಯಿತಿ ಸದಸ್ಯೆ ಕಾವ್ಯ ಎಂಬವರ ಸಹೋದರ ಕಿರಣ್ ಬೈಕ್ (ಕೆ.ಎ-೧೨ ಹೆಚ್-೧೦೩೯)ಅನ್ನು ಮನೆ ಮುಂಭಾಗ ನಿಲ್ಲಿಸಿದ್ದಾಗ ಕಳವು ಮಾಡಲಾಗಿತ್ತು. ಈ ಬಗ್ಗೆ ಕಾವ್ಯ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಕೈಗೊಂಡಾಗ ಹುಣಸೂರಿನ ಅಮೀರ್ ನಗರದ ನಿವಾಸಿ ಶಾರುಖ್ (ಪಂಚು - ೩೫) ಎಂಬಾತ ಆತನ ಸ್ನೇಹಿತನೊಂದಿಗೆ ಸೇರಿ ಬೈಕ್ ಕಳ್ಳತನ ಮಾಡಿ ಅದರ ನಂಬರ್ ಪ್ಲೇಟ್‌ಗಳನ್ನು ಬದಲಾವಣೆ ಮಾಡಿ ಹುಣಸೂರಿನಲ್ಲಿ ಓಡಾಡುತ್ತಿದ್ದು ತಿಳಿದು ಬಂದಿದ್ದು, ಆರೋಪಿ ೪ಐದÀನೇ ಪುಟಕ್ಕೆ

(ಮೊದಲ ಪುಟದಿಂದ) ಶಾರೂಖ್‌ನನ್ನು ಪೊಲೀಸರು ಬಂಧಿಸಿ ಕಳ್ಳತನ ಮಾಡಿದ್ದ ಬೈಕನ್ನು ವಶಪಡಿಸಿಕೊಂಡಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಶಾರುಖ್ ಈ ಹಿಂದೆ ಹುಣಸೂರಿನಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್, ಕ್ರೆöÊಂ ವಿಭಾಗದ ಠಾಣಾಧಿಕಾರಿ ಶಿವಣ್ಣ, ಸಹಾಯಕ ಠಾಣಾಧಿಕಾರಿ ಶ್ರೀನಿವಾಸ್ ಅಪರಾಧ ಪತ್ತೆದಳದ ಸಿಬ್ಬಂದಿ ಮಣಿಕಂಠ ಪಾಲ್ಗೊಂಡಿದ್ದರು. -ವಾಸು.