ಮಡಿಕೇರಿ, ಜು. ೧೨: ಕರ್ನಾಟಕ ರಾಜ್ಯ ಪುರುಷರ ಸಬ್ ಜೂನಿಯರ್ ಹಾಕಿ ತಂಡಕ್ಕೆ ಆಯ್ಕೆ ಪ್ರಕ್ರಿಯೆ ತಾ.೧೬ ರಂದು ಬೆಂಗಳೂರಿನ ಶಾಂತಿನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯:೩೦ ರಿಂದ ನಡೆಯಲಿದೆ. ೪ಐದÀನೇ ಪುಟಕ್ಕೆ
(ಮೊದಲ ಪುಟದಿಂದ) ತಮಿಳುನಾಡಿನ ಚೆನ್ನೆöÊನಲ್ಲಿ ಜುಲೈ ೨೮ ರಿಂದ ಆಗಸ್ಟ್ ೮ ರವರೆಗೆ ಹಾಕಿ ಇಂಡಿಯಾ ಸಬ್ ಜೂನಿಯರ್ ಪುರುಷರ ರಾಷ್ಟಿçÃಯ ಚಾಂಪಿಯನ್‌ಶಿಪ್ ನಡೆಯಲಿದ್ದು, ಆಯ್ಕೆಯಾದ ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಲಿದ್ದಾರೆ. ೨೦೦೯ರ ಜನವರಿ ೧ ಹಾಗೂ ನಂತರದಲ್ಲಿ ಜನಿಸಿದವರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಹಾಕಿ ಕರ್ನಾಟಕದ ಕಾರ್ಯದರ್ಶಿ ಎ.ಬಿ. ಸುಬ್ಬಯ್ಯ ಅವರು ತಿಳಿಸಿದ್ದಾರೆೆ.