ಮಡಿಕೇರಿ, ಜು. ೧೨: ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಗೌ. ಮುಖ್ಯ ನ್ಯಾಯಮೂರ್ತಿಗಳು ಗೌ. ಸರ್ವೋಚ್ಚ ನ್ಯಾಯಾಲಯ ಅವರು ದೇಶಾದಾದ್ಯಂತ ಜುಲೈ ೧ ರಿಂದ ಅಕ್ಟೋಬರ್ ೭ ರವರೆಗೆ ೯೦ ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟçಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ ೯೦ ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ತಿಳಿಸಿದ್ದಾರೆ.