ವೀರಾಜಪೇಟೆ, ಜು. ೧೨: ಹುಟ್ಟಿದ ಮೇಲೆ ಬದುಕಿನಲ್ಲಿ ಸಾರ್ಥಕತೆ ಕಾಣಬೇಕು. ಆಗಿದ್ದಲ್ಲಿ ಮಾತ್ರ ಜೀವನಕ್ಕೊಂದು ಅರ್ಥ ಬರುತ್ತದೆ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಪಾದಿಸಿದರು.

ಪಟ್ಟಣದ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ಪೊನ್ನಣ್ಣ ಅವರ ಹುಟ್ಟುಹಬ್ಬ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ ೨ ವರ್ಷದ ಕೆಲಸದ ಕುರಿತಾದ ವಾಗ್ದಾನ-ಅನುಷ್ಠಾನ ಪುಸ್ತಕ ಹಾಗೂ ಮಾನಸ ತಿಮ್ಮಯ್ಯ ಅವರು ಪೊನ್ನಣ್ಣ ಅವರು ಕುರಿತು ಬರೆದ ಇಂಗ್ಲೀಷ್ ಪುಸ್ತಕ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯ ಜನತೆ ತನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನಂಬಿಕೆಗೆ ಸದಾ ಚಿರಋಣಿ. ಚುನಾವಣಾ ಪೂರ್ವ ನೀಡಿದ್ದ ಭರವಸೆಗಳನ್ನು ಹಂತಹAತವಾಗಿ ಪೂರ್ಣ ಗೊಳಿಸುತ್ತಿರುವ ತೃಪ್ತಿ ಇದೆ. ಮುಂದೆಯೂ ಜನಪರವಾಗಿ ಕೆಲಸ ಮಾಡಿ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜಾತ್ಯತೀತ, ಸಾಮರಸ್ಯ ಹಾಗೂ ಸಮೃದ್ಧ ನಾಡನ್ನು ನಿರ್ಮಿಸುವ ಕನಸಿನೊಂದಿಗೆ ಮುನ್ನಡೆಯೋಣ ಎಂದು ಕರೆ ನೀಡಿದರು.

ವಾಗ್ದಾನ-ಅನುಷ್ಠಾನ ಪುಸ್ತಕ ಜನತಾ ನ್ಯಾಯಾಲಯದ ೨ನೇ ಅಫಿಡವಿಟ್ ಆಗಿದೆ. ೨ ವರ್ಷದ ಕೆಲಸಗಳ ಮಾಹಿತಿಯನ್ನು ವಿವರಿಸಲಾಗಿದೆ ಎಂದು ತಿಳಿಸಿದರು.

ಹುಟ್ಟುಹಬ್ಬದ ಪ್ರಯುಕ್ತ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ, ಸಹೋದರ ನರೇನ್ ಕಾರ್ಯಪ್ಪ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಹಾ ಸೇರಿದಂತೆ ಇನ್ನಿತರರು ಹಾಜರಿದ್ದರು.