ಕೂಡಿಗೆ, ಜು. ೧೩: ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಅಂದಗೋವೆ, ನಾಕೂರು-ಶಿರಂಗಾಲ, ಕಾನ್‌ಬೈಲ್, ಬೈಚನಹಳ್ಳಿ, ಹೆರೂರು, ಕಲ್ಲೂರು ವ್ಯಾಪ್ತಿಯಲ್ಲಿ ಕಾಡಾನೆ ಕಾರ್ಯಾಚರಣೆ ನಡೆಯಿತು. ಕಾಡಾನೆಗಳ ಹಾವಳಿ ಹೆಚ್ಚಾಗಿರುವುದರ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನಲೆ ಗ್ರಾಮದ ತೋಟದಲ್ಲಿದ್ದ ಎರಡು ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅತ್ತೂರು ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಸೇರಿದಂತೆ ಅರಣ್ಯ ಕ್ಷಿಪ್ರ ಕಾರ್ಯಾಚರಣೆ ತಂಡದ ಸದಸ್ಯರು ಹಾಜರಿದ್ದರು.