ಸುಂಟಿಕೊಪ್ಪ, ಜು. ೧೩: ಪ್ರವಾಸಿಗರು ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಮಹಾರಾಷ್ಟçದ ಕಂಪನಿಯ ಉದ್ಯೋಗಿಗಳು ಮೂವರು ಕಾರಿನಲ್ಲಿ ಮಡಿಕೇರಿ ಕಡೆಗೆ ತೆರಳುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ರಾಷ್ಟಿçÃಯ ಹೆದ್ದಾರಿಯ ಬಾಳೆಕಾಡು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚರಂಡಿಗೆ ಮಗುಚಿಕೊಂಡಿದೆ. ಚಾಲಕ ಹಾಗೂ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.