ಚೆಯ್ಯಂಡಾಣೆ, ಜು. ೧೩: ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಕೊಳಕೇರಿ ದರ್ಗಾದಲ್ಲಿ ಅಂತ್ಯವಿಶ್ರಾAತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವನ್ನು ೨೦೨೬ರ ಏಪ್ರಿಲ್ ೩ರಿಂದ ೭ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಳಕೇರಿ ಸುನ್ನಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.