ಸೋಮವಾರಪೇಟೆ, ಜು. ೧೩: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮು ದಾಯ ಅಬಿವೃದ್ಧಿ ಕಾರ್ಯಕ್ರಮ ದಡಿಯಲ್ಲಿ ಸೋಮವಾರಪೇಟೆ ತಾಲೂಕಿನ ಸರಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಯೋಜನಾ ಕಛೇರಿಯಲ್ಲಿ ವಿತರಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಹಾಗೂ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಅವರುಗಳು, ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶಕಿ ಲೀಲಾವತಿ, ಕ್ಷೇತ್ರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಶಾಲೆಗಳಿಗೆ ಪೀಠೋಪಕರಣ ವಿತರಣೆ, ಜ್ಞಾನದೀಪ ಶಿಕ್ಷಕರ ನೇಮಕ, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯ ವೇತನ ಪಾವತಿ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗಿದೆ ಎಂದರು. ಜಿಲ್ಲೆಯ ಮಡಿಕೇರಿ ತಾಲೂಕಿನ ೧ ಶಾಲೆಗೆ, ವೀರಾಜಪೇಟೆ ತಾಲೂಕಿನ ೮ ಶಾಲೆಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ ೬ ಶಾಲೆÀಗಳಿಗೆ ಒಟ್ಟು ೧೫ ಶಾಲೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು ತಿಳಿಸಿದರು. ಸೋಮವಾರಪೇಟೆ ತಾಲೂಕಿನ ಜ್ಞಾನದೀಪ ಶಿಕ್ಷಕರಾದ ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶೀಲಾ ಎ.ಎಲ್, ಕಿರಗಂದೂರಿನ ರಶ್ಮಿ ಟಿ.ಪಿ., ಹುಲುಗುಂದದ ನಿತ್ಯ ವಿ.ಎನ್, ೭ನೇ ಹೊಸಕೋಟೆಯ ಜಯಲಕ್ಷಿö್ಮÃ ಹೆಚ್. ಜೆ., ಬಳಗುಂದದ ಮಾನಸ ಕೆ.ಎಂ. ಅವರುಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಈ ಸಂದರ್ಭ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.