ಮಡಿಕೇರಿ, ಜು. ೧೩: ವೀರಾಜಪೇಟೆ ತಾಲೂಕು ಹಿರಿಯ ನಾಗರಿಕರ ವೇದಿಕೆಯ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ. ೧೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವೇದಿಕೆಯ ಅಧ್ಯಕ್ಷ ಮಲ್ಲೇಂಗಡ ಶಂಕರಿ ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ಮಹಿಳಾ ಸಮಾಜದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ವಿಮಲಮ್ಮ ಭಾಗವಹಿಸಲಿದ್ದಾರೆ. ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಹಾಗೂ ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕ ಬಾನಂಗಡ ಅರುಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ಸಾಧನೆಗೈದ ಮಲ್ಲೇಂಗಡ ಮಮ್ತಾ ದೇಚಕ್ಕ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.