ಮಡಿಕೇರಿ, ಜು. ೧೪: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಭೇಟಿ ಯಾಗಿ ಮನವಿ ಸಲ್ಲಿಸಿದರು.
ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಸಂಸದರು ರಾಷ್ಟಿçÃಯ ವಿಪತ್ತು ನಿರ್ವಹಣಾ ನಿಧಿ ಮೂಲಕ ಅನುದಾನ ಬಿಡುಗಡೆ ಮಾಡುವಂತೆ ಗಮನ ಸೆಳೆದು ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸಾರ್ವಜನಿ ಕರ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗ ಳಿಗೆ ಎನ್‌ಡಿಆರ್‌ಎಫ್ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡುವುದರೊಂದಿಗೆ ಹೆಚ್ಚುವರಿ ಪರಿಹಾರ ಬಿಡುಗಡೆಗೆ ಕೋರಿದರು.
ಹೆಚ್ಚುವರಿ ಅನುದಾನದಿಂದ ತಡೆಗೋಡೆ ನಿರ್ಮಾಣ, ರಸ್ತೆಗಳ ದುರಸ್ತಿ ಮಾಡಿಸಲು ಸಾಧ್ಯವಾಗಲಿದೆ. ತಂಬಾಕು ಮತ್ತು ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ದೊರಕಿಸಿಕೊಡ ಬೇಕು ಎಂದು ಮನವಿ ಮಾಡಿದರು.
ಕೊಡಗಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಎಚ್ಚರಿಕೆ ಅಗತ್ಯವಾಗಿದೆ. ಈ ಕುರಿತು ಗೃಹ ಸಚಿವಾಲಯ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
ಮನವಿಗೆ ಪೂರಕವಾಗಿ ಸಚಿ ವರು ಸ್ಪಂದಿಸಿದ್ದಾರೆ ಎಂದು ಯದುವೀರ್ ತಿಳಿಸಿದ್ದಾರೆ.