ವೀರಾಜಪೇಟೆ, ಜು. ೧೪: ವೀರಾಜಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಕೃಷಿ ಕಾರ್ಯಕ್ರಮದಡಿ ಯಲ್ಲಿ ವೀರಾಜಪೇಟೆ ವಲಯದ ಬಿಟ್ಟಂಗಾಲ ಕಾರ್ಯಕ್ಷೇತ್ರದ ಬಿ. ಶೆಟ್ಟಿಗೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯ ಶಿಕ್ಷಕಿ ಸುಜಾತ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಪವಲಯ ಅರಣ್ಯ ಅಧಿಕಾರಿ ಶ್ರೀಧರ್ ಅವರು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪರಿಸರÀ ಸಂಬAಧ ಉತ್ತಮವಾದ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆೆ. ನಮ್ಮ ಜನಸಂಖ್ಯೆ ಹೆಚ್ಚಾದಂತೆ ಅರಣ್ಯ ಸಂಖ್ಯೆ ಕಡಿಮೆಯಾಗುತ್ತದೆ. ಗಿಡ ನೆಡುವಿಕೆಯಿಂದ ಅರಣ್ಯ ಸಂರಕ್ಷಿಸಬಹುದು, ಪರಿಸರವು ನಮಗೆ ಆಹಾರ, ನೀರು, ಗಾಳಿ ಮತ್ತು ಇತರ ಅಗತ್ಯ ಸಂಪನ್ಮೂಲ ಗಳನ್ನು ಒದಗಿಸುತ್ತದೆ ಎಂದು ಮಾಹಿತಿ ನೀಡಿದರು.

ಬಿಟ್ಟಂಗಾಲ ಒಕ್ಕೂಟದ ಅಧ್ಯಕ್ಷ ರಂಜನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕÀ ವಸಂತ್, ವಲಯ ಮೇಲ್ವಿಚಾರಕ ಶಿವಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಕವಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಸಂಘದ ಸದಸ್ಯರು ಪದಾಧಿಕಾರಿಗಳು ಶಾಲಾ ವಿದ್ಯಾರ್ಥಿಗಳು ಸೇವಾ ಪ್ರತಿನಿಧಿ ಸಬಿತ ಇದ್ದರು.