ಪೊನ್ನಂಪೇಟೆ, ಜು. ೧೪: ಪೊನ್ನಂಪೇಟೆ ಸಾಯಿ ಶಂಕರ್ ವಿದ್ಯಾಸಂಸ್ಥೆಯ ೨೦೨೫- ೨೬ ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪೊನ್ನಂಪೇಟೆ ಪೊಲೀಸ್ ಠಾಣೆ ಸಿಬ್ಬಂದಿ ಅನುಪಮ ಮತ್ತು ನಟರಾಜ್ ಅವರು ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್ಗಳನ್ನು ವಿತರಿಸಿದರು. ಮುಖ್ಯ ಶಿಕ್ಷಕಿ ರೀನಾ ಅವರು ವಿದ್ಯಾರ್ಥಿ ಸಂಘದ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕಿ ನಿರೀಕ್ಷಾ ಸ್ವಾಗತಿಸಿ, ಭವಾನಿ ವಂದಿಸಿ, ರೇಷ್ಮಾ ನಿರೂಪಿಸಿದರು.