ಮಡಿಕೇರಿ, ಜು. ೧೪: ಭೂಕಂದಾಯ ಮಸೂದೆಗೆ ತಿದ್ದುಪಡಿ ತರುವಂತೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಮನವಿ ಸಲ್ಲಿಸಿದರು.

ವಿಕಾಸಸೌಧದಲ್ಲಿ ಸಚಿವರನ್ನು ಭೇಟಿಯಾದ ಪೊನ್ನಣ್ಣ ಅವರು, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ ಪಿ. ನಂಬರ್‌ಗಳ ಸಮಸ್ಯೆಯನ್ನು ನಿವಾರಣೆ ಮಾಡಲು ತಿದ್ದುಪಡಿಯ ಅವಶ್ಯಕತೆ ಇದೆ ಎಂದು ಗಮನ ಸೆಳೆದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನ ದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾ ಗುವುದೆಂಬ ಭರವಸೆಯನ್ನು ನೀಡಿ ದ್ದಾರೆ ಎಂದು ಪೊನ್ನಣ್ಣ ತಿಳಿಸಿದ್ದಾರೆ.