*ಗೋಣಿಕೊಪ್ಪ, ಜು. ೧೪: ಮಡಿಕೇರಿಯಿಂದ ತಲಕಾವೇರಿ ಸಂಚಾರಕ್ಕೆ ಉತ್ತಮ ರಸ್ತೆಗಳ ನಿರ್ಮಾಣವಾಗಬೇಕಾಗಿದೆ. ಕುಂದಚೇರಿ ಗ್ರಾಮದಲ್ಲಿ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶರತ್ ಪದಕಲ್ಲು ಮನವಿ ಸಲ್ಲಿಸಿದರು.
ಕುಂದಚೇರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಗ್ರಾಮದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ ಬೋಪಯ್ಯ, ಮಾಜಿ ಸಚಿವ ಅಪ್ಪಚ್ಚು ರಂಜನ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಅಶ್ವಿನ್ ಕಾಂಗೀರ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ಮನುಮುತ್ತಪ್ಪ, ವಿ.ಎಸ್.ಎಸ್.ಎನ್. ಅಧ್ಯಕ್ಷ ಶ್ರೀಧರ್, ನಿರ್ದೇಶಕರುಗಳು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಗಳು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.
ಈ ಸಂದರ್ಭ ಸಿಂಗತ್ತೂರು ಗ್ರಾಮದ ಬಹುವರ್ಷಗಳ ಬೇಡಿಕೆಯ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ವ್ಯವಸ್ಥೆಯನ್ನು ವೀಕ್ಷಿಸಿದ ಸಂಸದರು, ಜೀರ್ಣೋದ್ಧಾರ ಕಾರ್ಯಕ್ಕೆ ಅನುದಾನ ಒದಗಿಸುವ ಭರವಸೆ ನೀಡಿದರು.