ಐಗೂರು, ಜು. ೧೫: ಭಾರೀ ಮಳೆಯಿಂದ ಮನೆಯ ಗೋಡೆ ಕುಸಿದು ಮನೆಯವರು ಆತಂಕಗೊAಡ ಘಟನೆ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಬಿ. ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ರಾಮು ಅವರ ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದೆ. ಮನೆಯವರು ಮಳೆಯಿಂದ ರಕ್ಷಿಸಿಕೊಳ್ಳಲು ಮನೆಯ ಸುತ್ತಲು ತಾತ್ಕಾಲಿಕವಾಗಿ ಪ್ಲಾಸ್ಟಿಕ್ ಟಾರ್ಪಲಿನ ಹೊದಿಕೆಯನ್ನು ಕಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಭೋಜಮ್ಮ, ಸದಸ್ಯ ಸಲೀಂ ಹೊಸತೋಟ, ಗ್ರಾಮ ಲೆಕ್ಕಾಧಿಕಾರಿ ದೀಪಿಕಾ, ಗ್ರಾ.ಪಂ. ಕಾರ್ಯದರ್ಶಿ ನವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.