ಮಡಿಕೇರಿ, ಜು. ೧೫: ವಿವಿಧ ಬೇಡಿ ಕೆಗಳನ್ನು ಮುಂದಿಟ್ಟು ಭಾಗಮಂಡಲ ನಾಡು ಗೌಡ ಸಮಾಜ ನಿಯೋಗ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಭಾಗಮಂಡಲದಲ್ಲಿ ೧೯೮೩ ರಲ್ಲಿ ನಿರ್ಮಿಸಿರುವ ಗೌಡ ಸಮುದಾಯ ಭವನದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದ್ದು, ಭಾಗಮಂಡಲ ಭಾಗದ ಏಕೈಕ ಸಮುದಾಯ ಭವನ ಇದಾಗಿದೆ. ಗೌಡ ಸಮಾಜ ಮತ್ತು ಎಲ್ಲಾ ವರ್ಗ ದವರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನ ನಿರ್ಮಿಸಲು ಅನುದಾನ ಮಂಜೂರು ಮಾಡುವಂತೆ ಸೇರಿದಂತೆ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಮನವಿ ಸಲ್ಲಿಸಿತು. ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭ ಸಮಾಜದ ಅಧ್ಯಕ್ಷ ಕುದುಪಜೆ ಪಿ. ಪಳಂಗಪ್ಪ, ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದುಪಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು, ನಿಡ್ಯಮಲೆ ರವಿ, ಕುದುಪಜೆ ಗಗನ್, ನಿಡ್ಯಮಲೆ ದಾಮೋದರ, ಅಮೆ ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.