ಸೋಮವಾರಪೇಟೆ, ಜು. ೧೫: ಇಂದಿನ ಸ್ಮರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಸಾಕ್ಷರತೆಯಲ್ಲಿ ಮುಂದುವರಿದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಹೆಚ್ಪಿ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಚೂರಿಗಿಡ್ನ ವಿಜಯ್ಕುಮಾರ್ ಹೇಳಿದರು.
ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೂ. ೪೦ ಲಕ್ಷ ವೆಚ್ಚದಲ್ಲಿ ಹೆಚ್ಪಿ ಸಂಸ್ಥೆಯಿAದ ನಿರ್ಮಿಸಲಾದ ಸುಸಜ್ಜಿತ ಕಂಪ್ಯೂಟರ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯೆಯಿಂದ ಎಲ್ಲವೂ ಸಾಧ್ಯ. ಆದರೆ ವಿದ್ಯೆಯನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಪುಸ್ತಕಗಳಿಂದ ನಾವು ಜ್ಞಾನವನ್ನು ಗಳಿಸಬಹುದು. ಆದರೆ ಇಂದಿನ ಯುಗದಲ್ಲಿ ಕಂಪ್ಯೂಟರ್ ಜ್ಞಾನವಿದ್ದರೆ ಮಾತ್ರ ಮುಂದುವರಿಯಲು ಸಾಧ್ಯ.
ಪ್ರತಿಯೋರ್ವ ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿತರೆ ಮಾತ್ರ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನಡೆಸಬೇಕಾದದು ಅನಿವಾರ್ಯ ವಾಗಿದೆ. ನನ್ನ ಕುಟುಂಬದವರು ಓದಿದ ಸರ್ಕಾರಿ ಶಾಲೆಗೆ ಸೇವೆ ಮಾಡಬೇಕೆಂಬ ಸದುದ್ದೇಶದಿಂದ ಕಂಪ್ಯೂಟರ್ಗಳನ್ನು ನಮ್ಮ ಸಂಸ್ಥೆಯ ವತಿಯಿಂದ ಕೊಡಿಸಿದ್ದೇನೆ ಎಂದು ಹೇಳಿದರು. ಸಾಹಿತಿ ಹಾಗೂ ಶಿಕ್ಷಕರಾದ ಕಾಜೂರು ಸತೀಶ್ ಮಾತನಾಡಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಕಂಪ್ಯೂಟರ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಂಪ್ಯೂಟರ್ ಶಿಕ್ಷಣವನ್ನು ಪಡೆದು ವಿದ್ಯಾರ್ಜನೆ ಮಾಡಿದ ಶಾಲೆಗೆ ಹಾಗೂ ಗುರು-ಹಿರಿಯರಿಗೆ ಕೀರ್ತಿಯನ್ನು ತರಬೇಕೆಂದು ಆಶಿಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ವಹಿಸಿದ್ದರು. ವೇದಿಕೆಯಲ್ಲಿ ಚೌಡ್ಲು ಪಂಚಾಯಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಉದ್ಯಮಿ ಚೂರಿಗಿಡ್ನ ವೇಣು, ಲಲಿತ ರಂಗಸ್ವಾಮಿ, ಮುಖ್ಯ ಶಿಕ್ಷಕಿ ಯಶೋಧ, ಬಿಆರ್ಸಿ ಪ್ರೇಮಾ ಹಾಗೂ ರಾಷ್ಟಿçÃಯ ಹಾಕಿ ತರಬೇತುದಾರ ಸಿ.ಬಿ. ದೇವದಾಸ್ ಇದ್ದರು. ಕಂಪ್ಯೂಟರ್ಗಳನ್ನು ಕೊಡುಗೆಯಾಗಿ ನೀಡಿದ ಚೂರಿಗಿಡ್ನ ಕುಟುಂಬದ ಸದಸ್ಯರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.