ಕೇಂದ್ರ ಸಚಿವ ಸಂಪುಟದಿAದ ಯೋಜನೆ ಅನುಮೋದನೆ

ಕೇಂದ್ರ ಸಚಿವ ಸಂಪುಟವು, ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ ಉದ್ಯೋಗ ಸಂಬAಧಿತ ಪ್ರೋತ್ಸಾಹಕ (ಇಐI) ಯೋಜನೆಗೆ ಅನುಮೋದನೆ ನೀಡಿದ್ದು, ಈ ಮೂಲಕ ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿ, ಉದ್ಯೋಗಾರ್ಹತೆ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ.

(ಇಐI) ಯೋಜನೆಯಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಿಗಳು ಒಂದು ತಿಂಗಳ ವೇತನವನ್ನು (ರೂ. ೧೫,೦೦೦ ವರೆಗೆ) ಪಡೆಯಲಿದ್ದು, ಉದ್ಯೋಗ ನೀಡುವವರಿಗೆ ಹೆಚ್ಚುವರಿ ಉದ್ಯೋಗವನ್ನು ಸೃಷ್ಟಿಸಲು ಎರಡು ವರ್ಷಗಳ ಅವಧಿಗೆ ಪ್ರೋತ್ಸಾಹ ಧನ ಕೂಡ ನೀಡಲಾಗುವುದು. ಉತ್ಪಾದನಾ ವಲಯಕ್ಕೆ ಮತ್ತೆ ಎರಡು ವರ್ಷಗಳವರೆಗೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಆಗಸ್ಟ್ ೧, ೨೦೨೫ ಮತ್ತು ಜುಲೈ ೩೧, ೨೦೨೭ ರ ನಡುವೆ ಸೃಷ್ಟಿಯಾದ ಉದ್ಯೋಗಗಳಿಗೆ ಈ ಯೋಜನೆಯ ಪ್ರಯೋಜನಗಳು ಅನ್ವಯಿಸುತ್ತವೆ ಎಂದು ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ.

ಈ ಯೋಜನೆಯಡಿಯಲ್ಲಿ ಉದ್ಯೋಗಿಗಳಿಗೆ ಮೊದಲ ಸಂಭಾವನೆಯನ್ನು ಆಧಾರ್ ಬ್ರಿಡ್ಜ್ ಪಾವತಿ ವ್ಯವಸ್ಥೆ (ಂಃPS) ಮೂಲಕ ಆಃಖಿ (ನೇರ ಪ್ರಯೋಜನ ವರ್ಗಾವಣೆ) ವಿಧಾನದ ಮೂಲಕ ಮಾಡಲಾಗುತ್ತದೆ. ಯೋಜನೆಯಡಿ ಉದ್ಯೋಗ ನೀಡುವವರಿಗೆ ಪ್ರೋತ್ಸಾಹ ಧನವನ್ನು ನೇರವಾಗಿ ಅವರ ಪ್ಯಾನ್-ಲಿಂಕ್ಡ್ ಬ್ಯಾಂಕ್ ಖಾತೆಗಳಿಗೆ ಮಾಡಲಾಗುತ್ತದೆ.

ಇಐI ಯೋಜನೆ ಮೂಲಕ ಸರ್ಕಾರವು ಎಲ್ಲಾ ವಲಯಗಳಲ್ಲಿ, ವಿಶೇಷವಾಗಿ ಉತ್ಪಾದನಾ ವಲಯದಲ್ಲಿ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಉದ್ದೇಶಿಸಿದೆ ಹಾಗೂ ಮೊದಲ ಬಾರಿಗೆ ಉದ್ಯೋಗ ಪಡೆಯುವ ಯುವಕರನ್ನು ಪ್ರೋತ್ಸಾಹಿಸುವ ಸದುದ್ದೇಶ ಹೊಂದಿದೆ. ಹೆಚ್ಚಿನ ವಿವರಗಳನ್ನು - ಮೈಸೂರಿನ ಇPಈಔ ಪ್ರಾದೇಶಿಕ ಕಚೇರಿಯಲ್ಲಿ ಪಡೆಯಬಹುದು ಎಂದು ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ.