ಸಿದ್ದಾಪುರ, ಜು. ೧೬: ನೆಲ್ಲಿಹುದಿಕೇರಿ ಇತಿಹಾಸ ಪ್ರಸಿದ್ಧ ಶ್ರೀ ಸತ್ಯನಾರಾಯಣ ದೇವಾಲಯ ದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಗುರುವಾರ ಸಂಜೆ ಸಾಮೂಹಿಕ ಸತ್ಯನಾರಾಯಣ ವಿಶೇಷ ಪೂಜೆ ಕಾರ್ಯಕ್ರಮಗಳು ನಡೆದವು.
ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ಸತ್ಯನಾರಾಯಣ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ. ಟಿ.ಜಿ. ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.