ಸಿದ್ದಾಪುರ, ಜು. ೧೬: ಗಾಳಿ ಸಹಿತ ಧಾರಾಕಾರ ಮಳಿಯಿಂದ ಮನೆ ಸಂಪೂರ್ಣ ಹಾನಿಯಾಗಿದೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದ ಹಿಂಡಿ ನಿವಾಸಿ ಪಿ.ಎ. ಸುಮಯ್ಯ ಅವರಿಗೆ ಸೇರಿದ ಮನೆ ಕುಸಿದು ನಷ್ಟ ಉಂಟಾಗಿದೆ. ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.