ಜಿಲ್ಲೆಯ ೪೭ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಕಲಿಕೆ : ರಂಗಧಾಮಪ್ಪ

ಕುಶಾಲನಗರ: ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರವು ಇದೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿ ಆರಂಭಿಸಿದೆ.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ೪೭ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗ ಒಟ್ಟು ೭೪ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಪ್ಪ ಅವರು ತಿಳಿಸಿದರು.

ಕುಶಾಲನಗರ ಸಮೀಪ ಕೂಡ್ಲೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ರಂಗಧಾಮಪ್ಪ ಮನವಿ ಮಾಡಿದರು.

ಆಂಗ್ಲ ಮಾಧ್ಯಮ ಶಿಕ್ಷಣ ಕಲಿಕಾ ತರಗತಿಗೆ ಚಾಲನೆ ನೀಡಿ ಮಾತನಾಡಿದ ಉದ್ಯಮಿ ಕೆ.ಕೆ. ಮಂಜುನಾಥ್ ಕುಮಾರ್, ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ೪,೧೩೪ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು, ಗುಣಮಟ್ಟದ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದರು. ಕುಶಾಲನಗರ ತಾಲೂಕಿನ ಸರ್ಕಾರಿ ಶಾಲೆಗಳ ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿಗೆ ಸರ್ಕಾರ ಸೂಕ್ತ ಅನುದಾನ ನೀಡಲಿದೆ ಎಂದರು. ಆಂಗ್ಲ ಮಾಧ್ಯಮ ಶಿಕ್ಷಣ ಕೇವಲ ಕೆಲವರ ಸ್ವತ್ತಾಗಿತ್ತು. ಈಗ ಕಾಲ ಬದಲಾಗಿದೆ. ಈಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುತ್ತಿರುವುದರಿAದ ಗ್ರಾಮಾಂತರ ಪ್ರದೇಶಗಳ ಬಡ ಕೂಲಿ ಕಾರ್ಮಿಕರ ಮಕ್ಕಳು ಅಗತ್ಯ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಮಂಜುನಾಥ್ ಕುಮಾರ್ ಹೇಳಿದರು.

ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್, ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದು ಶ್ಲಾಘನೀಯ ಎಂದರು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮ ಉತ್ತಮವಾದುದ್ದು. ಸೋಮವಾರಪೇಟೆ ತಾಲೂಕಿನಲ್ಲಿ ೧೫ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಇದು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಇಂಗ್ಲೀಷ್ ಕಲಿಯುವ ಅವಕಾಶ ಲಭಿಸಿರುವುದು ಸಂತಸದ ವಿಷಯ. ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವ ಕುರಿತು ಸ್ಥಳೀಯವಾಗಿ ಅರಿವು ಮೂಡಿಸಿದರೆ ಶಾಲೆಗೆ ಹೆಚ್ಚು ಮಕ್ಕಳನ್ನು ದಾಖಲಿಸಲು ಸಾಧ್ಯ ಎಂದರು ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಗ್ರಾಮಾಂತರ ಪ್ರದೇಶದ ನಮ್ಮ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಹೆಚ್.ಎಸ್. ಸುಜಾತ, ತಮ್ಮ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಕರಿಸಿವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಸಿ.ಆರ್.ಪಿ., ಕೆ. ಶಾಂತಕುಮಾರ್, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಕೆ.ಎಸ್. ರಾಜಾಚಾರಿ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಗ್ರಾ.ಪಂ. ಪಿಡಿಓ ಎಂ.ಆರ್. ಸಂತೋಷ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪೂಜಾ, ಅರ್ಪಿತ, ಯಮುನ, ಸುಮತಿ, ಪ್ರಾಥಮಿಕ ಶಾಲೆಯ ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಇದ್ದರು. ಸಿ.ಆರ್.ಪಿ., ಕೆ. ಶಾಂತಕುಮಾರ್ ನಿರ್ವಹಿಸಿದರು.

ಗದ್ದೆಹಳ್ಳ ಶಾಲೆಯಲ್ಲಿ ಪರಿಸರ ದಿನ

ಸುಂಟಿಕೊಪ್ಪ: ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಪ್ರಾಣಿ-ಪಕ್ಷಿಗಳಿಗೆ ಆಹಾರ ದೊರಕಿ ಪರಿಸರವು ಸಮೃದ್ಧಿಯಾಗಿರುತ್ತದೆ ಎಂದು ಸುಂಟಿಕೊಪ್ಪ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಹೀದ್‌ಜಾನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ವತಿಯಿಂದ ನಡೆದ ಪರಿಸರ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಪರಿಸರದ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಂಡು ಮನೆಯ ಪರಿಸರದಲ್ಲಿ ಹಾಗೂ ಅರಣ್ಯಗಳಲ್ಲಿ ನಾವು ಹಣ್ಣಿನ ಗಿಡಗಳನ್ನು ಬೆಳೆಸಲು ಹೆಚ್ಚಿನ ಆದ್ಯತೆ ನೀಡುವುದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರ ದೊರೆಯುವುದಲ್ಲದೆ ಪರಿಸರವು ಅಭಿವೃದ್ಧಿಗೊಳ್ಳುತ್ತದೆ. ಆದ್ದರಿಂದ ಮಕ್ಕಳು ಮನೆ ಸೇರಿದಂತೆ ಅರಣ್ಯಗಳಲ್ಲಿ ಹಣ್ಣಿನ ಗಿಡಗಳನ್ನು ಪೋಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಗಿಡಗಳನ್ನು ನೆಡುವುದು ಒಂದು ದಿನಕ್ಕೆ ಸೀಮಿತವಾಗದೆ ಅವುಗಳನ್ನು ನಿತ್ಯವೂ ಆರೈಕೆಗೊಳಿಸುವ ಕಾರ್ಯವಾಗಬೇಕು. ಆಗಿದ್ದಲ್ಲಿ ಮಾತ್ರ ತಾವು ಕೈಗೊಂಡ ಕಾರ್ಯವು ಯಶಸ್ಸುಗೊಳ್ಳಲು ಸಾಧ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶ್ರೀ.ಕ್ಷೇ.ಧ.ಗ್ರಾ.ಯೋ. ಸುಂಟಿಕೊಪ್ಪ ವಲಯ ಮೇಲ್ವಿಚಾರಕರಾದ ಸಂತೋಷ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸಮಾರಂಭದ ವೇದಿಕೆಯಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಒಕ್ಕೂಟದ ಅಧ್ಯಕ್ಷ ನಾಗರತ್ನ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅನಿತಾ, ಸಹ ಶಿಕ್ಷಕಿ ಮೀನಾ ಪರಿಸರದ ಕುರಿತು ಮಾತನಾಡಿದರು.

ಈ ಸಂದರ್ಭ ಶೌರ್ಯ ಘಟಕದ ಸದಸ್ಯರು, ಸೇವಾ ಪ್ರತಿನಿಧಿ ಜ್ಯೋತಿಲಕ್ಷಿö್ಮÃ ಸ್ವಾಗತಿಸಿ, ಶಾಲಾ ಸಹ ಶಿಕ್ಷಕಿ ಅನಿತಾ ವಂದಿಸಿದರು.

ಕೊಡಗು ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ

ಮಡಿಕೇರಿ: ಶಿಕ್ಷಣದ ಗುರಿ ಕೇವಲ ಯಶಸ್ಸನ್ನು ಸಾಧಿಸುವುದಲ್ಲ, ಜೀವನದಲ್ಲಿ ಎದುರಾಗುವ ಸೋಲುಗಳನ್ನು ಧೈರ್ಯದಿಂದ ಎದುರಿಸುವುದನ್ನು ಕಲಿಸುವುದೂ ಶಿಕ್ಷಣದ ಧ್ಯೇಯವಾಗಿದೆ ಎಂದು ಹಿರಿಯ ವಕೀಲ ಎಂ.ಎA. ನಿರಂಜನ್ ಹೇಳಿದರು.

ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಸಮಾರಂಭದಲ್ಲಿ, ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಕ್ಕಳನ್ನು ಕೇವಲ ಅಂಕಗಳಿಸುವ ಯಂತ್ರಗಳನ್ನಾಗಿ ಮಾಡದೆ, ಮೌಲ್ಯಗಳನ್ನು ಮೈಗೂಡಿಸಿಕೊಂಡ ಸಹಾನುಭೂತಿಯುಳ್ಳ ಮನುಷ್ಯರನ್ನಾಗಿ ರೂಪಿಸುವುದು ಪೋಷಕರು ಮತ್ತು ಶಿಕ್ಷಕರ ಪ್ರಮುಖ ಕರ್ತವ್ಯ ಎಂದು ಅವರು ಹೇಳಿದರು.

ಇಂದಿನ ಸಮಾಜದಲ್ಲಿನ ಸೂಕ್ಷ್ಮತೆಯ ಕೊರತೆಯ ಬಗ್ಗೆ ಮಾತನಾಡಿದ ನಿರಂಜನ್, ಹಿಂದಿನ ದಿನಗಳಲ್ಲಿ ಅಪಘಾತ ಸಂಭವಿಸಿದಾಗ ತಕ್ಷಣ ಜನರು ಸಹಾಯ ಮಾಡಲು ಧಾವಿಸುತ್ತಿದ್ದರು. ಆದರೆ ಇಂದು ಘಟನೆ ನಡೆದ ಕೂಡಲೇ ಮೊಬೈಲ್ ತೆಗೆದು ವೀಡಿಯೋ ಮಾಡುವ ಮನಸ್ಥಿತಿ ಹೆಚ್ಚಾಗಿದೆ. ಕಾನೂನಿನ ಭಯ ಕಡಿಮೆಯಾಗುತ್ತಿರುವುದು ಈ ರೀತಿಯ ಅಮಾನವೀಯ ವರ್ತನೆಗೆ ಕಾರಣ ಎಂದು ವಿಷಾದಿಸಿದರು.

ಮೊಬೈಲ್ ಫೋನ್‌ಗಳ ಅತಿಯಾದ ಬಳಕೆಯ ಬಗ್ಗೆ ಎಚ್ಚರಿಸಿದ ಅವರು, ಮೊಬೈಲ್ ಫೋನ್ ಯುವಜನರ ಮತ್ತು ಮಕ್ಕಳ ಕೈಯಲ್ಲಿರುವ ಬಾಂಬ್‌ನAತೆ ಆಗಿದೆ. ಅದು ನಮ್ಮ ಕುಟುಂಬ ಸಂಬAಧಗಳನ್ನು ಹಾಳುಮಾಡುತ್ತಿದೆ. ಹಿಂದಿನ ದಿನಗಳಲ್ಲಿ ರಜಾ ಸಿಕ್ಕಿದಾಗ ಮಕ್ಕಳು ಅಜ್ಜಿ-ತಾತನ ಮನೆಗೆ ಹೋಗಿ ಸಂಭ್ರಮಿಸುತ್ತಿದ್ದರು. ಆದರೆ ಇಂದು, ಕುಟುಂಬದ ಪ್ರತಿಯೊಬ್ಬರೂ ತಮ್ಮ ತಮ್ಮ ಫೋನ್‌ಗಳ ಬಳಕೆಯಿಂದ ವಾಟ್ಸಾö್ಯಪ್ ಸಂದೇಶಗಳ ಮೂಲಕವೇ ಸಂವಹನ ನಡೆಸುವಂತಾಗಿದೆ. ಇದು ವಾಸ್ತವ ಮತ್ತು ತಿಳುವಳಿಕೆಯ ಕೊರತೆಗೆ ಕಾರಣವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಸುಮಿತ್ರ ಕೆ.ಎಸ್., ಆಡಳಿತ ನಿರ್ವಹಣಾ ಅಧಿಕಾರಿ ರವಿ ಪಿ., ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ಪೋಷಕರು ಪಾಲ್ಗೊಂಡಿದ್ದರು. ನೂತನವಾಗಿ ಆಯ್ಕೆಯಾದ ಶಾಲಾ ನಾಯಕರಿಗೆ ಈ ಸಂದರ್ಭ ಪ್ರಮಾಣ ವಚನ ಬೋಧಿಸಿ, ಅವರಿಗೆ ಜವಾಬ್ದಾರಿಗಳನ್ನು ಹಸ್ತಾಂತರಿಸಲಾಯಿತು.

ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ. ಪ್ರಾರಂಭೋತ್ಸವ

ಮಡಿಕೇರಿ: ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಪ್ರಾರಂಭೋತ್ಸವ ಕಾರ್ಯಕ್ರಮ ಸಂದರ್ಭ ವಿಶ್ವ ಜನಸಂಖ್ಯಾ ದಿನಾಚರಣೆ ಅರಿವು ಕಾರ್ಯಕ್ರಮ ನೆರವೇರಿತು.

ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಪ್ರಾಸ್ತಾವಿಕವಾಗಿ ಮಾತನಾಡಿ, ಐಸಿಡಿಎಸ್ ಸುವರ್ಣ ಮಹೋತ್ಸವದ ಅಂಗವಾಗಿ ಸರ್ಕಾರವು ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯನ್ನು ಪ್ರಾರಂಭಿಸುತ್ತಿದ್ದು, ತಾಲೂಕಿನ ೧೦ ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ.-ಯು.ಕೆ.ಜಿ. ಪ್ರಾರಂಭವಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು.

ಕಡಗದಾಳು ಗ್ರಾಮ ಪಂಚಾಯಿತಿಯಿAದ ೧೮ ಮಕ್ಕಳಿಗೆ ಸಮವಸ್ತç ಮತ್ತು ಐಡಿ ಕಾರ್ಡ್ಗಳನ್ನು, ಪುಸ್ತಕ, ಪೆನ್ಸಿಲ್, ಬ್ಲಾಕ್ಸ್, ಚಾರ್ಟ್, ಫಜಲ್ಸ್, ಪ್ಲೇ ಮ್ಯಾಟ್‌ಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಯಿತು. ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ಕಲ್ಮೇಶ್ ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಅರಿವು ಮೂಡಿಸಿದರು. ಸಾಂಕ್ರಾಮಿಕ ರೋಗಗಳ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಶಂಭಯ್ಯ ಮಾತನಾಡಿ, ಇದೊಂದು ಉತ್ತಮವಾದ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳು ಈಗಾಗಲೇ ಮುಚ್ಚುತ್ತಿದ್ದು ಇಂತಹ ಯೋಜನೆಯಿಂದ ಮಕ್ಕಳ ಮತ್ತು ಶಾಲೆಯ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.

ಈ ಸಂದರ್ಭ ನಿವೃತ್ತ ಅಂಗನವಾಡಿ ಸಹಾಯಕಿ ಕಮಲ ಅವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಪ್ರಾರ್ಥನೆ ಅಂಗನವಾಡಿ ಮಕ್ಕಳಿಂದ ನೆರವೇರಿತು. ಸ್ವಾಗತ, ನಿರೂಪಣೆ, ಅಂಗನವಾಡಿ ಕಾರ್ಯಕರ್ತೆ ಅನಿಲ ಕೆ.ಆರ್. ನಡೆಸಿದರು. ವಂದರ್ನಾರ್ಪಣೆ ಅಂಗನವಾಡಿ ಕಾರ್ಯಕರ್ತೆ ಸಾಜಿದ ಅವರಿಂದ ನೆರವೇರಿತು.

ಗೋಪಾಲಪುರ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ

ಶನಿವಾರಸಂತೆ: ಸಮೀಪದ ಗೋಪಾಲಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಆಂಗ್ಲ ಮಾಧ್ಯಮ ೧ನೇ ತರಗತಿ ಆರಂಭಕ್ಕೆ ಸರ್ಕಾರದ ಅನುಮತಿ ದೊರೆತ ಹಿನ್ನೆಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗ್ರಾಮದ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸಿದರು.

ಬ್ಯಾಂಡ್‌ಸೆಟ್‌ನೊAದಿಗೆ ಸಾಗಿದ ಜಾಥಾದಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಘೋಷಣೆಗಳನ್ನು ಕೂಗುವ ಮೂಲಕ ಪೋಷಕರ ಮನಸೆಳೆದು ಜಾಗೃತಿ ಮೂಡಿಸಲಾಯಿತು. ಮುಖ್ಯಶಿಕ್ಷಕಿ ಸಾವಿತ್ರಿ, ದೈಹಿಕ ಶಿಕ್ಷಣ ಶಿಕ್ಷಕಿ ಕವಿತಾ, ಸಹಶಿಕ್ಷಕಿಯರಾದ ಯಶೋಧಾ, ಮಾಲತಿ, ವಿಶಾಲಾಕ್ಷಿ, ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮ ಪ್ರಮುಖರು ಪಾಲ್ಗೊಂಡಿದ್ದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣದ ಜತೆಗೆ ಉತ್ತಮ ಸೌಲಭ್ಯಗಳು ದೊರೆಯುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ಕಲಿತ ಎಷ್ಟೋ ಮಂದಿ ಇಂದು ಅಧಿಕಾರಿಗಳಾಗಿ ಉನ್ನತ ಸ್ಥಾನಮಾನಗಳಲ್ಲಿ ಬದುಕು ರೂಪಿಸಿಕೊಂಡಿದ್ದಾರೆ. ಪೋಷಕರು ಸರ್ಕಾರಿ ಶಾಲೆಗಳ ಮೇಲೂ ಒಲವು ಮೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಪದಗ್ರಹಣ

ಮಡಿಕೇರಿ: ಕೂರ್ಗ್ ಪಬ್ಲಿಕ್ ಸ್ಕೂಲ್ ಹಾಗೂ ಪಿಯು ಕಾಲೇಜಿನ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮೊದಲನೇ ಪದಗ್ರಹಣ ಸಮಾರಂಭವನ್ನು ತಾ. ೧೨ ರಂದು ಮಲಾಲಾ ದಿನಾಚರಣೆಯ ಪ್ರಯುಕ್ತ ಸಂಭ್ರಮದಿAದ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಕೂರ್ಗ್ ಪಿ.ಯು. ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕಿಶೋರ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನೂತನವಾಗಿ ನೇಮಕಗೊಂಡ ವಿದ್ಯಾರ್ಥಿ ನಾಯಕರಿಗೆ ಪದವಿ ನೀಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಎಂ. ರಾಮಚಂದ್ರನ್ ಅವರು ಬಾಲ್ಯದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವವನ್ನು ಸಾರಿದರು. ಅವರು ೨೦೨೫-೨೬ನೇ ಶೈಕ್ಷಣಿಕ ವರ್ಷದ ಕೂರ್ಗ್ ಪಬ್ಲಿಕ್ ಸ್ಕೂಲ್‌ನ ಥೀಮ್ “ಅಚಿಣಛಿh ಖಿhem ಙouಟಿg, Wಚಿಣಛಿh ಖಿhem ಉಡಿoತಿ” ಎಂಬುದದ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ವಿಜಯಲಕ್ಷಿö್ಮ ಎಸ್. ಹಾಗೂ ವೇದಾ ಬೋಪಣ್ಣ, ಶೈಕ್ಷಣಿಕ ಸಂಯೋಜಕಿ ಸಾಂಚಿತ ಚೆಂಗಪ್ಪ ಮತ್ತು ಶ್ವೇತಾ ಗಣಪತಿ, ಶಾಲೆಯ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಕೂಡಿಗೆ ಪದವಿಪೂರ್ವ ಕಾಲೇಜಿಗೆ ಜಂಟಿ ನಿರ್ದೇಶಕ ಭೇಟಿ

ಕೂಡಿಗೆ: ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೆ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಂಟಿ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ ಭೇಟಿ ನೀಡಿ ಕಾಲೇಜಿನ ಬೆಳವಣಿಗೆ, ಮುಂದಿನ ಯೋಜನೆಗೆ ಸಂಬAಧಿಸಿದAತೆ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ಅವರಿಂದ ಮಾಹಿತಿಯನ್ನು ಪಡೆದರು.

ಮುಂದಿನ ಸಾಲಿನಲ್ಲಿ ಕೂಡಿಗೆ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಕಂಪ್ಯೂಟರ್ ತರಗತಿಯನ್ನು ತೆರೆಯಲು ಕಾಲೇಜು ವತಿಯಿಂದ ಪ್ರಸ್ತಾವನೆಯನ್ನು ಕಳುಹಿಸುವಂತೆ ಪ್ರಾಂಶುಪಾಲರಿಗೆ ತಿಳಿಸಿದರು. ಕಂಪ್ಯೂಟರ್ ತರಗತಿಯನ್ನು ಮುಂದಿನ ಸಾಲಿನಲ್ಲಿ ಆರಂಭಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯ ಮುಖೇನ ಅನುಮತಿ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಪ್ರಾಂಶುಪಾಲ ಹೆಚ್.ಜೆ ನಾಗರಾಜ್, ಉಪನ್ಯಾಸಕರಾದ ನಾಗಪ್ಪ, ಕಾವೇರಮ್ಮ, ಎಂ.ಎA. ಸತೀಶ್, ಎಂ.ಟಿ. ರಮೇಶ್, ಬಿ.ಡಿ. ರವೀಶ್, ಲಿನೆಟ್ ಟಿ. ಫರ್ನಾಂಡೀಸ್, ಸೂಸಿ ತಂಗಚ್ಚನ್, ಹನುಮರಾಜ್, ಜಿ.ಪಿ. ಪ್ರೇಕ್ಷಿತ, ಅನುಷ, ಗೌತಮಿ, ಜಿ.ಡಿ. ನಂದಿನಿ ಇದ್ದರು.

ಪರಿಸರ ಜಾಗೃತಿ ಕಾರ್ಯಕ್ರಮ

ವೀರಾಜಪೇಟೆ: ವೀರಾಜಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕೃಷಿ ಕಾರ್ಯಕ್ರಮದಡಿಯಲ್ಲಿ ಪೊನ್ನಂಪೇಟೆ ವಲಯದ ಪೊನ್ನಂಪೇಟೆ ಕಾರ್ಯಕ್ಷೇತ್ರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಚಂಗಪ್ಪ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪರಿಸರ ಸಂರಕ್ಷಣೆ ಹಾಗೂ ಕಾರ್ಯಕ್ರಮದ ಬಗ್ಗೆ ವಲಯ ಮೇಲ್ವಿಚಾರಕ ನಾಗರಾಜ್ ಪ್ರಾಸ್ತವಿಕವಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೀಪ ಅವರು ಮಾತನಾಡಿ, ಗಿಡ-ಮರಗಳನ್ನು ಬೆಳೆಸಬೇಕು. ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು. ಪರಿಸರ ಸಂರಕ್ಷಣೆಯಿAದ ಶುದ್ಧವಾದ ಗಾಳಿ ನೀರು ಸಿಗುತ್ತದೆ. ಹಾಗೂ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದು ಕರೆ ಕೊಟ್ಟರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಲಯ ಉಪ ಅರಣ್ಯಾಧಿಕಾರಿ ಬಿರಾದರ್ ಜೆ.ಕೆ., ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ತಮ್ಮಯ್ಯ, ಕೃಷಿ ಮೇಲ್ವಿಚಾರಕ ವಸಂತ್, ಒಕ್ಕೂಟದ ಪದಾಧಿಕಾರಿಗಳಾದ ರೇಖಾ ಶ್ರೀಧರ್, ಅನುಪಮಾ, ಪೊನ್ನಂಪೇಟೆ ಸೇವಾ ಪ್ರತಿನಿಧಿ ಗೌರಿ ಶಾಲಾ ಶಿಕ್ಷಕರಾದ ನವ್ಯ, ಎ.ಎಸ್ ಪ್ರತಿಭಾ, ಚಿದಾನಂದ ವಿದ್ಯಾರ್ಥಿಗಳು ಹಾಜರಿದ್ದರು.