ಮಡಿಕೇರಿ, ಜು. ೧೭: ೪ನೇ ಏಷ್ಯನ್ ಸರ್ಫಿಂಗ್ ಚಾಂಪಿಯನ್‌ಶಿಪ್‌ಗೆ ವೀರಾಜಪೇಟೆಯ ಆದ್ಯ ಸಿಂಗ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾಳೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಮಂದಿನ ಆಗಸ್ಟ್ ತಿಂಗಳಿನಲ್ಲಿ ಪಂದ್ಯಾವಳಿ ನಡೆಯಲಿದ್ದು, ಇದರಲ್ಲಿ ಜೂನಿಯರ್ ವಿಭಾಗದಲ್ಲಿ ವೀರಾಜಪೇಟೆ ತೆಲುಗರ ಬೀದಿ ನಿವಾಸಿ ಅಜಯ್ ಸಿಂಗ್ ಹಾಗು ವಿಭಾ ದಂಪತಿ ಮಗಳು ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ ೧೦ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ ಭಾರತ ತಂಡಕ್ಕೆ ಸ್ಥಾನ ಪಡೆದಿದ್ದಾರೆ.