ಕೋವರ್ಕೊಲ್ಲಿ ಇಂದ್ರೇಶ್
ಬೆAಗಳೂರು, ಜು. ೧೬: ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್) ಗುರುತಿಸುವಿಕೆಯೊಂದಿಗೆ ಆನೆಗಳ ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐ.ಐ.ಎಸ್.ಸಿ. ಯೊಂದಿಗೆ ಒಡಂಬಡಿ ಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಕಾಸ ಸೌಧದ ತಮ್ಮ ಕಚೇರಿ ಯಲ್ಲಿಂದು ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವ ಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆಗಾಗಿ ಐದು ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು.
ಸ್ಯಾಟಲೈಟ್ ಟೆಲಿಮೆಟ್ರಿ, ಕ್ಯಾಮೆರಾ ಟ್ರಾö್ಯಪ್ಗಳು ಮತ್ತು ಜಿ.ಐ.ಎಸ್. ಮಾದರಿಗಳನ್ನು ಬಳಸಿಕೊಂಡು ಆನೆ ಕಾರಿಡಾರ್ಗಳನ್ನು ಗುರುತಿಸುವುದು ಮತ್ತು ಆನೆಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ಗುರುತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆನೆ ಲದ್ದಿಯಲ್ಲಿರುವ ಹಾರ್ಮೋನ್ಗಳ ಪರೀಕ್ಷೆ ನಡೆಸುವ ಮೂಲಕ ಆನೆಗಳ ದೇಹದ ಸ್ಥಿತಿ ಮತ್ತು ಒತ್ತಡ ಸೂಚಕ ಗಳನ್ನು ಅಂದಾಜು ಮಾಡಲಾಗುತ್ತದೆ. ಅದೇ ರೀತಿ ಬೆಳೆ ನಾಶದ ಮಾದರಿಗಳ ಅಧ್ಯಯನ, ಸಂಘರ್ಷದ ಹಾದಿ ತುಳಿದ ಆನೆಗಳ ಅಧ್ಯಯನ - ವಿಶ್ಲೇಷಣೆ ಮಾಡಿ ರೈತರಿಗೆ ಅರಿವು ಮೂಡಿಸುವುದೂ ಈ ಯೋಜನೆಯ ಭಾಗವಾಗಿದೆ ಎಂದು ತಿಳಿಸಿದರು.
ಆನೆಗಳು ನಾಡಿನತ್ತ ಬಂದಾಗ ಮುನ್ನೆಚ್ಚರಿಕೆಯ ಗಂಟೆ ಮೊಳಗಿಸುವ ವ್ಯವಸ್ಥೆ ರೂಪಿಸುವ ಹಾಗೂ ಸ್ವಯಂ ಚಾಲಿತ ಧ್ವನಿಯಂತ್ರಗಳ ಮೂಲಕ ಆನೆಗಳನ್ನು ಹಿಮ್ಮೆಟ್ಟಿಸುವ ಬಗ್ಗೆಯೂ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದರು. ಅರಣ್ಯ ಇಲಾಖೆ ಮತ್ತು ಭಾರತೀಯ ವಿಜ್ಞಾನ ಮಂದಿರದ ತಜ್ಞರು, ಅಧ್ಯಯನಿಗಳು ಆನೆಗಳ ವರ್ತನೆ,
(ಮೊದಲ ಪುಟದಿಂದ)
ಸ್ವಭಾವದ ದತ್ತಾಂಶ ಕ್ರೋಡೀಕರಿಸಿ ಆನೆಪಥ (ಕಾರಿಡಾರ್) ಹಾಗೂ ಮುಂದಿನ ೧೦ ವರ್ಷಗಳಲ್ಲಿ ಎದುರಾಗಬಹುದಾದ ಭವಿಷ್ಯದ ಸಂಘರ್ಷ ಪ್ರದೇಶ ಗುರುತಿಸಲೂ ಈ ಅಧ್ಯಯನ ನೆರವಾಗಲಿದೆ ಎಂದು ಈಶ್ವರ್ ಖಂಡ್ರೆ ಆಶಯ ವ್ಯಕ್ತಪಡಿಸಿದರು.
ಪ್ರೊ. ರಮನ್ ಸುಕುಮಾರ್ ಮಾತನಾಡಿ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ನಾವು ಕಾರಣಗಳನ್ನು ತಿಳಿಯುವುದು ಇಂದಿನ ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ಈ ಒಡಂಬಡಿಕೆ ಮಹತ್ವಪೂರ್ಣವಾದುದಾಗಿದೆ ಎಂದರು.
ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಉಪಸ್ಥಿತರಿದ್ದರು.