ಸುಂಟಿಕೊಪ್ಪ, ಜು. ೧೬: ಸುಂಟಿಕೊಪ್ಪದಲ್ಲಿ ಕಳೆದ ೧೬ ವರ್ಷ ಗಳಿಂದ ಆಶಾ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್. ಶಿವಮ್ಮ, ಪಾರ್ವತಿ, ಟಿ.ಆರ್. ವೀಣಾ ಅವರನ್ನು ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು. ಕಾನ್‌ಬೈಲ್ ನಾಕೂರು ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆ ಯಾಗಿದ್ದ ಬಿ.ಎಸ್. ಶಿವಮ್ಮ, ಅತ್ತೂರು ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಿಬಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ವೀಣಾ, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಪ್ ಭಾಗದಲ್ಲಿ ಆಶಾ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸುತ್ತಿದ್ದ ಪಾರ್ವತಿ ಅವರುಗಳಿಗೆ ಸಹೋದ್ಯೋಗಿಗಳು ಸನ್ಮಾನಿಸಿ ಬೀಳ್ಕೊಟ್ಟರು.