ವೀರಾಜಪೇಟೆ, ಜು. ೧೭: ವೀರಾಜಪೇಟೆ ಪಟ್ಟಣದ ತೆಲುಗರ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಆಷಾಢÀ ಮಾಸದ ಮೂರನೇ ಶುಕ್ರವಾರದಂದು ವಿಶೇಷ ಪೂಜೆ ನಡೆಯಿತು.

ಬೆಳಿಗ್ಗೆಯಿಂದ ಅಭಿಷೇಕ ಪೂಜೆ, ಅಲಂಕಾರ ಪೂಜೆ ಹಾಗೂ ಮಧ್ಯಾಹ್ನ ವಿಶೇಷ ಮಹಾಪೂಜೆಯನ್ನು ಸಲ್ಲಿಸಲಾಯಿತು. ಪೂಜೆಯ ಬಳಿಕ ನೆರೆದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನಡೆಸಲಾಯಿತು.

ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಪಿ. ಕೃಷ್ಣ, ಪ್ರಧಾನ ಅರ್ಚಕ ಹರೀಶ್, ವೇಣು, ಮಂಜುನಾಥ್, ಟಿ.ಟಿ. ರವಿ, ಟಿ.ಡಿ. ಲೋಕೇಶ್, ಹರೀಶ್ ಸೇರಿದಂತೆ ದೇವಾಲಯದ ಆಡಳಿತ ಮಂಡಳಿಯ ಸದಸ್ಯ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು.