ಮಡಿಕೇರಿ, ಜು. ೧೭: ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಸಹಯೋಗದಲ್ಲಿ ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದಿAದ ಕಥೆ ಹೇಳುವ ಸ್ಪರ್ಧೆ ಆಯೋಜಿಸಲಾಗಿದೆ. ಆಗಸ್ಟ್ ೩ ರಂದು ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ. ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವೀರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ತಮ್ಮ ಹೆಸರನ್ನು ತಾ. ೨೫ ರೊಳಗಾಗಿ ನೋಂದಾಯಿಸಿಕೊಳ್ಳಲು ೯೩೫೩೫೩೧೯೭೬ ಅಥವಾ ೭೭೬೦೯೦೮೭೭೪ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.