ಕರಿಕೆ, ಜು. ೧೭: ಇಲ್ಲಿಗೆ ಸಮೀಪದ ಚೆತ್ತುಕಾಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾವ್ಯ ಶ್ರೀ ಚಾರಿಟೇಬಲ್ ಟ್ರಸ್ಟ್ ಕೊಡಮಾಡುವ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಪ್ರಸನ್ನ ಕುಮಾರಿ ಸನ್ಮಾನ ಹಾಗೂ ಪ್ರಶಸ್ತಿ ಸ್ವೀಕರಿಸಿದರು.