ಕುಶಾಲನಗರ, ಜು. ೧೭: ಕುಶಾಲನಗರ ಸಮೀಪದ ಬೈಲುಕುಪ್ಪೆ ಟಿಬೆಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್, ಮಾರಾಟ ಮಾಡಲು ಯತ್ನಿಸುತ್ತಿದ್ದ ಕುಶಾಲನಗರದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ನಾಲ್ವರು ಯುವಕರನ್ನು ಬಂಧಿಸುವಲ್ಲಿ ಬೈಲುಕುಪ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕುಶಾಲನಗರದ ಕಿಶನ್ (೨೨) ಮತ್ತು ವಿದ್ಯಾರ್ಥಿಗಳಾದ ಉಲ್ಲಾಸ್ (೨೨) ಮತ್ತು ಚೆರೀಶ್ (೨೨) ಹಾಗೂ ಮೈಸೂರಿನ ಮೇಟಗಳ್ಳಿ ನಿವಾಸಿ ಅಖಿಲೇಶ್ (೨೨) ಬಂಧಿತರು. ಖಚಿತ ಮಾಹಿತಿ ಮೇರೆಗೆ ಬೈಲುಕೊಪ್ಪ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಎಚ್.ಎಸ್. ರವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಂದರ್ಭ ಬೆಂಗಳೂರಿನಿAದ ತರಲಾದ ಎಂಟು ಗ್ರಾಂ ಬ್ರೌನ್ ಶುಗರ್ ಟಿಬೇಟಿಯನ್ ವ್ಯಕ್ತಿಗಳಿಗೆ ಮಾರಾಟ ಮಾಡುವ ಸಂದರ್ಭ ಆರೋಪಿಗಳು ಮಾಲು ಸಹಿತ ಸಿಕ್ಕಿಬಿದ್ದಿದ್ದಾರೆ.
ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾ ಚರಣೆಯಲ್ಲಿ ಸಿಬ್ಬಂದಿಗಳಾದ ಸುರೇಶ್, ಮದ್ದುರಾಜು, ತ್ರಿನೇಶ್, ವಿಜಯ್ ಪವಾರ್ ಪಾಲ್ಗೊಂಡಿದ್ದರು.