ಮಡಿಕೇರಿ, ಜು. ೧೭: ತಂಬಾಕು ಮುಕ್ತ ವಲಯಗಳಲ್ಲಿ ಧೂಮಪಾನ ನಿಷೇಧವಿದ್ದರೂ ಕೆಲವು ಹೊಟೇಲ್ ಅಂಗಡಿ ಮುಂದೆ ಸಾರ್ವಜನಿಕರು ಧೂಮಪಾನ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಅಧಿಕಾರಿಗಳು ವರ್ತಕರಿಗೆ ದಂಡ ವಿಧಿಸಿದ್ದಾರೆ.

ಸಿದ್ದಾಪುರ ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕೋಶ, ಆಹಾರ ಸುರಕ್ಷಿತ, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಎಲ್ಲಾ ಅಂಗಡಿ ಮುಂಗಟ್ಟುಗಳು ಹೊಟೇಲ್‌ಗಳಿಗೆ ದಿಢೀರ್ ದಾಳಿ ನಡೆಸಿ ಧೂಮಪಾನ ನಿಷೇಧ, ಆಹಾರ ಗುಣಮಟ್ಟ, ಶುಚಿತ್ವ ಸುರಕ್ಷತ ಕ್ರಮ ಕೈಗೊಂಡಿರುವ ಬಗ್ಗೆ ಪರಿಶೀಲನೆ ನಡೆಸಿದರು. ಕೆಲವು ವರ್ತಕರು ನಿಯಮ ಉಲ್ಲಂಘಿಸಿರುವುದನ್ನ ಪತ್ತೆ ಹಚ್ಚಿ ದಂಡ ವಿಧಿಸಿ ಎಚ್ಚರಿಕೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಬಗ್ಗೆ ಭಿತ್ತಿ ಪತ್ರಗಳನ್ನು ಅಳವಡಿಸಿ ಜಾಗೃತಿ ಮೂಡಿಸಿದರು.

ಈ ಸಂದರ್ಭ ಪರಿಶೀಲನ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಅಧಿಕಾರಿ ಮಂಜುನಾಥ್, ತಾಲೂಕು ಆರೋಗ್ಯ ನಿರೀಕ್ಷಕ ಅಧಿಕಾರಿ ಶಶಿಕಾಂತ್, ಆಹಾರ ಸುರಕ್ಷತಾ ಅಧಿಕಾರಿ ಮಂಜುನಾಥ್, ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಅಭಿಲಾಷ್, ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.