ಮಡಿಕೇರಿ, ಜು. ೧೭: ಬಹುಭಾಷಾ ತಾರೆ, ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಶೆಟ್ಟಿ ನಟನೆಯ ೫ ಭಾಷೆಗಳಲ್ಲಿ ತಯಾರಾಗಿರುವ ‘ದಿ ಗರ್ಲ್ಫ್ರೆಂಡ್’ ಸಿನಿಮಾದ ಮೊದಲ ಗೀತೆ ಬಿಡುಗಡೆಗೊಂಡಿದೆ.
ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ನಿರ್ಮಾಣದ ಈ ಸಿನಿಮಾ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ತಯಾರಾಗಿದೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತದ ಈ ಹಾಡು ಜನಮೆಚ್ಚುಗೆಗೆ ಪಾತ್ರವಾಗಿದೆ.