ಕೂಡಿಗೆ, ಜು. ೧೭: ಸಾಂಕ್ರಾಮಿಕ ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಳ್ಳಲಾಗಿದೆ.

ಸುಂದರನಗರ ಅಂಗನವಾಡಿ, ಸಮುದಾಯ ಭವನದ ಬಳಿ ಸೊಳ್ಳೆಗಳ ಕಾಟದ ಹಿನ್ನೆಲೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿರುವ ಹಿನ್ನೆಲೆ ಸುತ್ತಮುತ್ತಲಿನ ಜಾಗದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಸ್ಥಳಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಗುತ್ತಿದೆ.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಷಂಶುದ್ದೀನ್, ಅಭಿವೃದ್ಧಿ ಅಧಿಕಾರಿ ಸಂತೋಷ್, ನೀರು ಗಂಟಿ ಕುಮಾರ್, ಪೌರಕಾರ್ಮಿಕರಾದ ನಾಗರಾಜ್, ಪುಟ್ಟಮ್ಮ ಹಾಗೂ ಗ್ರಾಮಸ್ಥರು ಇದ್ದರು.