ಕುಶಾಲನಗರ, ಜು.೧೮: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ತಕ್ಷಣ ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ಕುಶಾಲನಗರದಲ್ಲಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಕುಶಾಲನಗರ ಎಸ್‌ಡಿಪಿಐ ನಗರ ಅಧ್ಯಕ್ಷ ಜಕ್ರಿಯಾ ನೇತೃತ್ವದಲ್ಲಿ ಪಟ್ಟಣದ ಎಸ್‌ಡಿಪಿಐ ಕಚೇರಿ ಮುಂಭಾಗ ಸೇರಿದ ಕಾರ್ಯಕರ್ತರು ಘೋಷಣೆ ಕೂಗಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಪ್ರಮುಖರಾದ ಉಸ್ಮಾನ್ ಸುಂಟಿಕೊಪ್ಪ, ಭಾಷಾ ಮತ್ತಿತರರು ಇದ್ದರು.