ಮಡಿಕೇರಿ, ಜು. ೧೮: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೨೪ ರಂದು ಮಧ್ಯಾಹ್ನ ೧೨ ಗಂಟೆಗೆ ಮಹಾ ಪೂಜೆಯ ನಂತರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೊಲಿಂಕಾನ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೊಲಿಂಕಾನ ಉತ್ಸವ ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ತಿಳಿಸಿದ್ದಾರೆ.