ವೀರಾಜಪೇಟೆ, ಜು. ೧೯: ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂತಹÀ ವಿನೂತನ ಪರಿಕಲ್ಪನೆಯಾದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ವೀರಾಜಪೇಟೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗಿದೆ.
ವೀರಾಜಪೇಟೆ ಠಾಣಾಧಿಕಾರಿ ಪ್ರಮೋದ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಐಮಂಗಲ, ಶಿವಕೇರಿ ಕಲ್ಲುಬಾಣೆ ಸೇರಿದಂತೆ ಇತರ ಗ್ರಾಮಾಂತರ ಪ್ರದೇಶಗಳಿಗೆ ತೆರಳಿ ಮನೆ ಮನೆಗೆ ಪೊಲೀಸರ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಭಾಗವಾಗಿ ಪೊಲೀಸ್ ಸಿಬ್ಬಂದಿ ಅಭಿಯಾನ ಪ್ರಮೋದ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಐಮಂಗಲ, ಶಿವಕೇರಿ ಕಲ್ಲುಬಾಣೆ ಸೇರಿದಂತೆ ಇತರ ಗ್ರಾಮಾಂತರ ಪ್ರದೇಶಗಳಿಗೆ ತೆರಳಿ ಮನೆ ಮನೆಗೆ ಪೊಲೀಸರ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಭಾಗವಾಗಿ ಪೊಲೀಸ್ ಸಿಬ್ಬಂದಿ ಅಭಿಯಾನ ಕೈಗೊಂಡು, ಸೈಬರ್ ಅಪರಾಧ, ಮಾದಕ ವಸ್ತು, ಬಾಲಾಪರಾಧ, ಪೋಕ್ಸೋ ಕಾಯಿದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ವೃತ್ತ ನಿರೀಕ್ಷಕರು, ಠಾಣಾಧಿಕಾರಿಗಳು, ಎ.ಎಸ್.ಐ., ಪೊಲೀಸ್ ಸಿಬ್ಬಂದಿಗಳು ಅಭಿಯಾನವನ್ನು ಮುನ್ನಡೆಸಿದರು.