ಕೂಡಿಗೆ, ಜು. ೧೯: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೂಡಿಗೆಯ ಶ್ರೀಶಕ್ತಿ ವೃದ್ಧಾಶ್ರಮದಲ್ಲಿ ಸಾಂಕ್ರಾಮಿಕ ರೋಗ ಕುರಿತು ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞಾ ಅವರು ಮಾತನಾಡಿ, ಡೆಂಗ್ಯೂ ಹಾಗೂ ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆಹಚ್ಚಿ ಸಂಪೂರ್ಣವಾದ ಚಿಕಿತ್ಸೆಯನ್ನು ನೀಡುವುದರ ಮೂಲಕ ಗುಣಪಡಿಸ ಬಹುದು ಎಂದು ತಿಳಿಸಿದರು. ಡೆಂಗ್ಯೂ ಜ್ವರ ಹಾಗೂ ಮಲೇರಿಯ ಜ್ವರದ ಲಕ್ಷಣ, ಮಲೇರಿಯ ಜ್ವರದ ಬಗ್ಗೆ, ಚಿಕನ್ ಗುನ್ಯಾ ಜ್ವರದ ಬಗ್ಗೆ ರಾಷ್ಟಿçÃಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ, ಲಕ್ಷಣಗಳ ಬಗ್ಗೆ ಚಿಕಿತ್ಸಾ ವಿಧಾನಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು. ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನಿರೀಕ್ಷಣಾಧಿಕಾರಿ ಚಂದ್ರೇಶ್ ಮಾತನಾಡಿ, ರಾಷ್ಟಿçÃಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ, ವಿಶ್ವ ಜನಸಂಖ್ಯಾ ದಿನಾಚರಣೆಯ ಮಹತ್ವ ಹಾಗೂ ಪರಿಸರ ಸ್ವಚ್ಛತೆಯ ಬಗ್ಗೆ, ನೀರಿನ ಶುಚಿತ್ವದ ಬಗ್ಗೆ ಹಾಗೂ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಶಕ್ತಿ ವೃದ್ಧಾಶ್ರಮದÀ ವ್ಯವಸ್ಥಾಪಕ ಚಂದ್ರು, ವಿನಿಲ್ ಎಸ್.ಟಿ.ಎಸ್. ಹಾಗೂ ಶ್ರೀಧರ್ ಹಾಜರಿದ್ದರು.