ನಾಪೋಕ್ಲು, ಜು. ೧೯: ಸಮೀಪದ ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೩೨ ವರ್ಷಗಳ ಕಾಲ ಗುಮಾಸ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಯು. ಸಾವಿತ್ರಿ ಅವರನ್ನು ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡ ಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾಪಂಡ ರ‍್ಯಾಲಿ ಮಾದಯ್ಯ ಉಪಾಧ್ಯಕ್ಷ ಕೆ.ಸಿ. ತಿಮ್ಮಯ್ಯ, ಕಾರ್ಯ ನಿರ್ವಣಾಧಿಕಾರಿ ಪಿ.ಯು. ಕಾವೇರಮ್ಮ ಮತ್ತು ನಿರ್ದೇಶಕರು, ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕ ನಾರಾಯಣ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.