ಕೂಡಿಗೆ, ಜು. ೨೦: ಹೆಬ್ಬಾಲೆ ಗ್ರಾಮದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಆಷಾಢ ಮಾಸದ ವಿಶೇಷ ಪೂಜೆಯು ಶ್ರದ್ಧಾಭಕ್ತಿಯಿಂದ ನಡೆಯಿತು.

ಬೆಳಿಗ್ಗೆಯಿಂದ ಅಭಿಷೇಕ, ಪೂಜೆ, ವಿಶೇಷ ಅಲಂಕಾರ, ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ಮಹಿಳಾ ಸಂಘಟನೆಯ ವತಿಯಿಂದ ದೇವಿಯ ಭಜನೆಗಳು ನಡೆದವು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ, ಉಪಾಧಕ್ಷ ಮಂಜುನಾಥ್, ಕಾರ್ಯದರ್ಶಿ ಸೋಮಶೇಖರ್, ಖಜಾಂಚಿ ಲೋಕೇಶ್, ನಿರ್ದೇಶಕರುಗಳು, ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.