ಮಡಿಕೇರಿ, ಜು. ೨೦: ಕೊಡಗು ವಿಶ್ವವಿದ್ಯಾಲಯ ಹಾಗೂ ಕೊಡಗು ವಿ.ವಿ. ಹಿತರಕ್ಷಣಾ ಬಳಗದ ಸಂಯುಕ್ತಾಶ್ರಯದಲ್ಲಿ ತಾ. ೨೩ ರಂದು ಬೆಳಿಗ್ಗೆ ೧೦.೩೦ ಕ್ಕೆ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ಮಾಧ್ಯಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊಫೆಸರ್ ಅಶೋಕ ಸಂಗಪ್ಪ ಅಲೂರ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಕ್ತಿ ಪತ್ರಿಕೆಯ ಸಂಪಾದಕÀ ಜಿ. ಚಿದ್ವಿಲಾಸ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕುಶಾಲನಗರ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಭಾಗವಹಿಸಲಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಹಾಗೂ ಕೊಡಗು ಪತ್ರಕರ್ತರ ಬಳಗದ ನಿಕಟಪೂರ್ವ ಅಧ್ಯಕ್ಷÀ ಮುರಳಿಧರ್ ಉಪಸ್ಥಿತರಿರಲಿದ್ದಾರೆ.