ಮಡಿಕೇರಿ, ಜು. ೨೦: ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದಂತೆ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರ ವಿರುದ್ಧ ಮಾಜಿ ಅಧ್ಯಕ್ಷೆ ಉಳ್ಳಿಯಡ ಡಾಟಿ ಪೂವಯ್ಯರಿಂದ ದಾಖಲಾದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಪೂಮಾಲೆ ವಾರಪತ್ರಿಕೆ ಸಂಪಾದಕ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರು, ವಾಟ್ಸಾö್ಯಪ್ ಗ್ರೂಪ್‌ಗಳಲ್ಲಿ ವೈಯಕ್ತಿಕ ದ್ವೇಷದಿಂದ ಮಾನಹಾನಿಕಾರಕವಾಗಿ ನನ್ನನ್ನು ಚಿತ್ರಿಸಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಬ್ರಹ್ಮಗಿರಿ ವಾರಪತ್ರಿಕೆ ಉಪ ಸಂಪಾದಕಿ ಉಳ್ಳಿಯಡ ಡಾಟಿ ಪೂವಯ್ಯ ಅವರು ಮಡಿಕೇರಿ ಮಹಿಳಾ ಪೊಲೀಸ್ ಠಾಣೆಗೆ ಪುಕಾರು ನೀಡಿದ್ದಾರೆ. ಈ ಹಿನ್ನೆಲೆ ಅಜ್ಜಿನಿಕಂಡ ಮಹೇಶ್ ನಾಚಯ್ಯರವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.