ಮಡಿಕೇರಿ, ಜು. ೨೦: ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸgವನ್ನು ಸ್ವಚ್ಛವಾಗಿ ಇಟ್ಟುಕೊಂಡರೆ ಡೆಂಗ್ಯೂ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ ಎಂದು ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆರೋಗ್ಯ ಶಿಕ್ಷಣ ನೀಡಿದರು. ಮಡಿಕೇರಿ ಗೌಳಿಬೀದಿ ಸಮೀಪದ ಕಂಚಿಕಾಮಾಕ್ಷಿ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ ಡೆಂಗ್ಯೂ ವಿರೋಧಿ ಮಾಸಾಚರಣೆಯಲ್ಲಿ ಮನೆಯ ಸುತ್ತಮುತ್ತ ಸ್ವಚ್ಛ ಪರಿಸರ, ಶುದ್ಧ ನೀರು ಇರುವಂತೆ ನೋಡಿಕೊಳ್ಳಬೇಕು ಹಾಗೂ ಚರಂಡಿಗಳಲ್ಲಿ ನೀರು ನಿಲ್ಲದಂತೆ ಮತ್ತು ಲಾರ್ವಾ ಉತ್ಪತ್ತಿ ಆಗದಂತೆ ಎಚ್ಚರ ವಹಿಸುವುದು ಅತ್ಯಗತ್ಯವಾಗಿದೆ ಇದರಿಂದ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮಾಡಬಹುದು. ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು, ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮುಚ್ಚಳದಿಂದ ಮುಚ್ಚಬೇಕು, ಸೊಳ್ಳೆಗಳ ನಿಯಂತ್ರಣಕ್ಕಾಗಿ ಸೊಳ್ಳೆನಾಶಕ ಮತ್ತು ಸೊಳ್ಳೆ ಪರದೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜನರಿಗೆ ಮಾಹಿತಿ ನೀಡಲಾಯಿತು.
ನಗರಸಭೆ ಸದಸ್ಯರು ಹಾಗೂ ಗೌಳಿಬೀದಿ ಕೌನ್ಸಿಲರ್ ಆದ ಚಂದ್ರಶೇಖರ ಅವರು ಮಾತನಾಡಿ, ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ನಗರ ಸಭೆಯಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಶ್ರೀನಾಥ್ ಅವರು ಮಾತನಾಡಿ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಎಲ್ಲೆಡೆ ಮನೆ ಮನೆ ಭೇಟಿ ಮಾಡಿ ಲಾರ್ವಾ ನಿರ್ಮೂಲನ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದು, ಎಲ್ಲರೂ ಸಹಕರಿಸಿದರೆ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದರು. ನಗರ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕಾಧಿಕಾರಿ ರೇವತಿ, ಆರೋಗ್ಯ ನಿರೀಕ್ಷಣಾಧಿಕಾರಿ ದೇವಿಪ್ರಸಾದ್ ಹಾಗೂ ಪ್ರಾ.ಆ. ಕೇಂದ್ರಗಳಿAದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.