ಮಡಿಕೇರಿ, ಜು. ೨೧: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು.ಮಡಿಕೇರಿ ಸಮೀಪದ ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಪತ್ರಕರ್ತರಿ ಗಾಗಿ ಏರ್ಪಡಿಸಿದ್ದ ಹ್ಯಾಂಡ್ ಬಾಲ್, ಹಗ್ಗಜಗ್ಗಾಟ, ಕೆಸರು ಗದ್ದೆ ಓಟದಲ್ಲಿ ಜಿಲ್ಲೆಯ ಪತ್ರಕರ್ತರು ಪಾಲ್ಗೊಂಡಿ ದ್ದರು.

ಎಲ್ಲಾ ವಿಭಾಗದಲ್ಲಿ ಒಟ್ಟು ಆರು ತಂಡಗಳು ಪಾಲ್ಗೊಂಡಿದ್ದು ಹ್ಯಾಂಡ್ ಬಾಲ್ ವಿಭಾಗದಲ್ಲಿ ನಾಟಿ ಬಾಯ್ಸ್ ತಂಡ ಪ್ರಥಮ, ಮಡ್‌ಫೀಲ್ಡರ್ಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಹಗ್ಗಜಗ್ಗಾಟದಲ್ಲಿ ಮಡ್ ಫೈಟರ್ಸ್ ತಂಡ ಪ್ರಥಮ, ನಾಟಿ ಬಾಯ್ಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಕೆಸರುಗದ್ದೆ ಓಟದ ಮಹಿಳಾ ವಿಭಾಗದಲ್ಲಿ ವತ್ಸಲ ಎಸ್.ಆರ್. ಪ್ರಥಮ, ಬಿ.ಆರ್.ಸವಿತಾ ರೈ ದ್ವಿತೀಯ ಸ್ಥಾನ ಪಡೆದರು.

ಪುರುಷರ ೪೦ ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಗೋಪಾಲ್ ಸೋಮಯ್ಯ ಪ್ರಥಮ, ಅಜ್ಜಮಾಡ ರಮೇಶ್ ಕುಟ್ಟಪ್ಪ ದ್ವಿತೀಯ ಹಾಗೂ ಪಾರ್ಥ ಚಿಣ್ಣಪ್ಪ ತೃತೀಯ ಸ್ಥಾನ, ಕಿರಿಯರ ವಿಭಾಗದಲ್ಲಿ ಇಸ್ಮಾಯಿಲ್ ಪ್ರಥಮ, ದಿವಾಕರ್ ಜಾಕಿ ದ್ವಿತೀಯ ಹಾಗೂ ನವೀನ್ ಡಿಸೋಜಾ ತೃತೀಯ ಬಹುಮಾನ ಪಡೆದುಕೊಂಡರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕ್ರೀಡಾ ಸಂಚಾಲಕ ಸುವರ್ಣ ಮಂಜು, ಕೆಸರುಗದ್ದೆ ಮಾಲೀಕರಾದ ಮಲ್ಲನ ಆನಂದ್ ಪಾಲ್ಗೊಂಡಿದ್ದರು. ಕ್ರೀಡಾಕೂಟದ ತೀರ್ಪುಗಾರರಾಗಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಹೆಬ್ಬೆಟ್ಟಗೇರಿ ಮತ್ತು ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕರಾದ ದೀನಾ ಪಾಲ್ಗೊಂಡಿದ್ದರು. ಪ್ರಾರ್ಥನಾ ರೈ ಪ್ರಾರ್ಥಿಸಿ, ಪ್ರೆಸ್ ಕ್ಲಬ್ ಹಿರಿಯ ಉಪಾಧ್ಯಕ್ಷ ನವೀನ್ ಡಿಸೋಜಾ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಕಾರ್ಯಕ್ರಮ ನಿರೂಪಿಸಿ, ವಿಶ್ಚ ಕುಂಬೂರು ವಂದಿಸಿದರು.