ಕೂಡಿಗೆ, ಜು. ೨೧: ಹೆಬ್ಬಾಲೆ ಗ್ರಾಮದ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಆಷಾಢ ಮಾಸದ ವಿಶೇಷ ಪೂಜೆ ಶ್ರಧ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆಯಿಂದ ಅಭಿಷೇಕ, ಪೂಜೆ, ವಿಶೇಷ ಅಲಂಕಾರ, ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮಹಿಳಾ ಸಂಘಟನೆಯ ವತಿಯಿಂದ ಭಜನೆ ನಡೆಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ, ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಸೋಮಶೇಖರ್, ಖಜಾಂಚಿ ಲೋಕೇಶ್, ಇನ್ನಿತರರು ಹಾಜರಿದ್ದರು.