ಉಪರಾಷ್ಟçಪತಿ ಸ್ಥಾನಕ್ಕೆ ಜಗದೀಪ್ ರಾಜೀನಾಮೆ

ನವದೆಹಲಿ, ಜು. ೨೧: ಭಾರತದ ಉಪರಾಷ್ಟçಪತಿ ಜಗದೀಪ್ ಧಂಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ಕಾರಣ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ನಿಟ್ಟಿನಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ರಾಷ್ಟçಪತಿ ದ್ರೌಪದಿ ಮುರ್ಮು ಅವರಿಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜಗದೀಪ್ ಧಂಖರ್ ೨೦೨೨ ರಿಂದ ಭಾರತದ ಉಪರಾಷ್ಟçಪತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆ ಅವರು ೨೦೧೯ ರಿಂದ ೨೦೨೨ ರವರೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಢಾಕಾದಲ್ಲಿ ವಿಮಾನ ಪತನ - ೧೯ ಮಂದಿ ಸಾವು

ಢಾಕಾ, ಜು. ೨೧: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಶಾಲೆಯ ಆವರಣದಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ೧೯ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಾಂಗ್ಲಾದ ವಾಯುಪಡೆಯ ಈ-೭ ಃಉI ತರಬೇತಿ ವಿಮಾನವು ಮಧ್ಯಾಹ್ನ ೧ ಗಂಟೆ ಸುಮಾರಿಗೆ ಉತ್ತರದಲ್ಲಿ ಪತನಗೊಂಡಿದೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ. ಘಟನಾ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿದೆ. ಘಟನೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿಮಾನವು ಶಾಲೆಯ ಕ್ಯಾಂಟೀನ್ ಮೇಲೆ ಪತನಗೊಂಡಿದೆ. ಗಾಯಾಳುಗಳನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

೪೨೬ ಡ್ರೋನ್-೨೪ ಕ್ಷಿಪಣಿ ಬಳಸಿ ದಾಳಿ

ಕೀವ್, ಜು. ೨೧: ರಷ್ಯಾ ಪಡೆಗಳು ರಾತೋರಾತ್ರಿ ೪೨೬ ಡ್ರೋನ್‌ಗಳು ಹಾಗೂ ೨೪ ಕ್ಷಿಪಣಿಗಳನ್ನು ದೇಶದತ್ತ ಹಾರಿಸಿದೆ ಎಂದು ಉಕ್ರೇನ್ ವಾಯು ಪಡೆ ಸೋಮವಾರ ತಿಳಿಸಿದೆ. ದೇಶದತ್ತ ಬಂದ ಕ್ಷಿಪಣಿಗಳು ಹಾಗೂ ೨೨೪ ಡ್ರೋನ್‌ಗಳನ್ನು ಹೊಡೆದುರುಳಿಸಿದ್ದೇವೆ. ಉಳಿದವು ರಾಡಾರ್ ವ್ಯಾಪ್ತಿಗೆ ಸಿಕ್ಕಿಲ್ಲ ಎಂದು ಹೇಳಿದೆ. ರಷ್ಯಾ ಸೇನಾ ಪಡೆಗಳು ೨೦೨೨ರ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ದಾಳಿ ಆರಂಭಿಸಿದ್ದವು. ಆಗಿನಿಂದ, ಉಭಯ ದೇಶಗಳ ನಡುವೆ ಸಂಘರ್ಷ ನಡೆಯುತ್ತಿವೆ. ಯುದ್ಧ ನಿಲ್ಲಿಸುವಂತೆ ಉಭಯ ದೇಶಗಳಿಗೆ ಜಾಗತಿಕ ನಾಯಕರು ಒತ್ತಾಯ ಮಾಡುತ್ತಿದ್ದಾರೆ.

ಮುಡಾ ಪ್ರಕರಣ - ಮೇಲ್ಮನವಿ ವಜಾ

ನವದಹೆಲಿ, ಜು. ೨೧: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್ ಗವಾಯಿ ನೇತೃತ್ವದ ಪೀಠ, ಇ.ಡಿಯನ್ನು ಟೀಕಿಸಿದೆ. ರಾಜಕಾರಣಿಗಳು ರಾಜಕೀಯ ಮಾಡಿಕೊಳ್ಳಲಿ, ಇದರಲ್ಲಿ ನಿಮಗೆ ಏನು ಕೆಲಸ ಎಂದು ಇ.ಡಿ.ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಇದರೊಂದಿಗೆ ಇದೀಗ, ಮುಡಾ ಹಗರಣದಲ್ಲಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ನಿರಾಳರಾದಂತಾಗಿದೆ. ಮುಡಾ ಹಗರಣಕ್ಕೆ ಸಂಬAಧಿಸಿದAತೆ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಇ.ಡಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ವಜಾ

ನವದೆಹಲಿ, ಜು. ೨೧: ರೈತರೊಬ್ಬರ ಆತ್ಮಹತ್ಯೆ ಕುರಿತು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬAಧಿಸಿದAತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರಿದ್ದ ಪೀಠವು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದೇನಿದು? ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಇಂತಹ ರಾಜಕೀಯ ಹೋರಾಟಗಳನ್ನು ನೀವು ನ್ಯಾಯಾಲಯದಿಂದ ಹೊರಗಿಟ್ಟುಕೊಳ್ಳಿ ಎಂದು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಸೂಚಿಸಿದರು. ಬಿಜೆಪಿ ಸಂಸದರಾಗಿರುವ ತೇಜಸ್ವಿ ಸೂರ್ಯ ಅವರು, ೨೦೨೪ರ ನವೆಂಬರ್ ೭ರಂದು ರೈತನ ಆತ್ಮಹತ್ಯೆಗೆ ಸಂಬAಧಿಸಿದAತೆ ಪೋಸ್ಟ್ವೊಂದನ್ನು ಹಂಚಿಕೊAಡಿದ್ದರು. ಅದರಲ್ಲಿ ತಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿ ಜಿಲ್ಲೆಯ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು. ರೈತನ ಆತ್ಮಹತ್ಯೆ ಬಗ್ಗೆ ತೇಜಸ್ವಿ ಸೂರ್ಯ ಅವರು ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅರ್ಜಿ

ನವದೆಹಲಿ, ಜು. ೨೧: ನಗದು ಪತ್ತೆ ಪ್ರಕರಣಕ್ಕೆ ಸಂಬAಧಿಸಿದAತೆ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ವಕೀಲ ಮ್ಯಾಥ್ಸ್ ನೆಡುಂಬಾರ ಅವರು ಈ ವಿಷಯಕ್ಕೆ ಸಂಬAಧಿಸಿದAತೆ ಇದು ತಮ್ಮ ಮೂರನೇ ಅರ್ಜಿಯಾಗಿದ್ದು, ಅದನ್ನು ತುರ್ತಾಗಿ ವಿಚಾರಣೆಗೆ ಪಟ್ಟಿ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವನ್ನು ಒತ್ತಾಯಿಸಿದರು. ಈ ಅರ್ಜಿಯನ್ನು ಈಗಲೇ ವಜಾಗೊಳಿಸಲು ನೀವು ಬಯಸುತ್ತೀರಾ ಎಂದು ಪ್ರಶ್ನಿಸಿದ ಸಿಜೆಐ, ಸೂಕ್ತ ಸಮಯದಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದರು. ಅರ್ಜಿಯನ್ನು ವಜಾಗೊಳಿಸುವುದು ಅಸಾಧ್ಯ. ಈ ಪ್ರಕರಣದ ಎಫ್‌ಐಆರ್ ದಾಖಲಿಸಬೇಕಾಗಿದೆ. ಈಗ ವರ್ಮಾ ಕೂಡಾ ಅದನ್ನೇ ಕೇಳುತ್ತಿರುವಂತೆ ತೋರುತ್ತಿದೆ. ಎಫ್‌ಐಆರ್ ದಾಖಲಿಸಿ ತನಿಖೆ ನಡೆಯಬೇಕು ಎಂದು ವಕೀಲರು ತಿಳಿಸಿದರು.