ಮಡಿಕೇರಿ, ಜು. ೩೧: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ವಿಶೇಷ ಘಟಕ ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸುಗಮ ಸಂಗೀತ ಕಲಾ ತರಬೇತಿ ಶಿಬಿರವು ತಾ. ೧ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ.
ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕ÷್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್, ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎಚ್.ಟಿ. ಅನಿಲ್ ಇತರರು ಪಾಲ್ಗೊಳ್ಳಲಿದ್ದಾರೆ.