ಶ್ರೀಮಂಗಲ, ಜು. ೩೧: ಕೊಡವ ಹಿತರಕ್ಷಣಾ ಬಳಗ, ಕ್ಗ್ಗಟ್ಟ್ನಾಡ್, ಪೊನ್ನಂಪೇಟೆ ಇವರ ವತಿಯಿಂದ ತಾ. ೩ ರಂದು ೧೪ನೇ ವರ್ಷದ ಕಕ್ಕಡ ಪದ್ನೆಟ್ಟ್ ಹಬ್ಬ ಆಚರಣೆ ಮತ್ತು ಹಬ್ಬದ ಪ್ರಯುಕ್ತ ಪೊನ್ನಂಪೇಟೆ ಮುಖ್ಯ ಬೀದಿಯಲ್ಲಿ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ.
ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖರು ಮಾಹಿತಿ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮ, ಟೆಲಿ ಫಿಲ್ಮ್ ಪ್ರದರ್ಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ಪ್ರಮುಖರು ತಿಳಿಸಿದ್ದಾರೆ. ಸಂಜೆ ೬ ಗಂಟೆಗೆ ಪೊನ್ನಂಪೇಟೆ ಕೊಡವ ಸಮಾಜದಿಂದ ಪಂಜಿನ ಮೆರವಣಿಗೆ ಆರಂಭವಾಗಿ ಪಟ್ಟಣದ ಬಸವೇಶ್ವರ ದೇವಸ್ಥಾನದ ವೃತ್ತ ಮೂಲಕ ಸಾಗಿ ಕೊಡವ ಸಮಾಜದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಬಳಗದ ಅಧ್ಯಕ್ಷ ಚಿರಿಯಪಂಡ ಎಂ. ರಾಜಾನಂಜಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಎಜುಕೇಶನ್ ಸೊಸೈಟಿ (ಸಿ.ಐ.ಟಿ.) ಅಧ್ಯಕ್ಷ ಡಾ. ಮುಕ್ಕಾಟಿರ ಸಿ. ಕಾರ್ಯಪ್ಪ ಮತ್ತು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಹಾಗೂ ಕೊಡವ ಜಾನಪದ ತಜ್ಞ ಕಾಳಿಮಾಡ ಎಂ. ಮೋಟಯ್ಯ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಪ್ರಗತಿಪರ ಕಾಫಿ ಬೆಳೆಗಾರ ಕಳ್ಳಿಚಂಡ ಚಂಗಪ್ಪ, ೧೦ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಂಬAಡ ಆಶ್ರಯಿ ಅಕ್ಕಮ್ಮ, ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಟ್ರಂಗಡ ಪನ್ಯ ಪೊನ್ನಮ್ಮ ಅವರನ್ನು ಸನ್ಮಾನಿಸಲಾಗುವುದು.
ಇದಲ್ಲದೇ ಟೆಲಿ ಫಿಲ್ಮ್ ಪ್ರದರ್ಶನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸಾಂಪ್ರದಾಯಿಕ ಕಕ್ಕಡ ಖಾದ್ಯ ತಿನಿಸು ಹಾಗೂ ವಿಶೇಷ ಉಟೋಪಚಾರವನ್ನು ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಸಮಿತಿಯ ಅಧ್ಯಕ್ಷ ಚಿರಿಯಪಂಡ ರಾಜಾ ನಂಜಪ್ಪ, ಕಾರ್ಯದರ್ಶಿ ಗಾಂಡAಗಡ ಕೌಶಿಕ್ ದೇವಯ್ಯ, ಖಜಾಂಚಿ ಕೋಟೆರ ಕಿಶನ್ ಉತ್ತಪ್ಪ, ನಿರ್ದೇಶಕರುಗಳಾದ ಅಡ್ಡಂಡ ಡಾಲಿ ಜನಾರ್ಧನ, ಆಲೇಮಾಡ ಸುಧೀರ್, ತೀತಿಮಾಡ ಸುಜಿತ್ ಭಾಗವಹಿಸಿದ್ದರು.