ಮಡಿಕೇರಿ,ಜು.೩೧; ಬಹು ಬೇಡಿಕೆಯಾಗಿರುವ ಮೈಸೂರು-ಕುಶಾಲನಗರ ರಸ್ತೆ ಕಾಮಗಾರಿ ಆರಂಭಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೇಂದ್ರ ರಸ್ತೆ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇಂದು ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮೈಸೂರು-ಕುಶಾಲನಗರ ರಸ್ತೆ ಕಾಮಗಾರಿಯ ಪ್ರಸ್ತುತ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು. ಪ್ಯಾಕೆಜ್-೨ ಯೋಜನೆಯಲ್ಲಿ ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಅರಣ್ಯದಲ್ಲಿನ ಮರಗಳ ತೆರವು ಮತ್ತು ಭೂಸ್ವಾದೀನ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಸಚಿವರು ಈ ಬಗ್ಗೆ ವಿಶೇಷ ಕಾಳಜಿ ವಹಿಸಿ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಶೀಘ್ರವಾಗಿ ಈ ಯೋಜನೆಗೆ ಚಾಲನೆ ನೀಡಲು ದಿನಾಂಕ ನಿಗದಿಪಡಿಸುವಂತೆ ಮನವಿ ಮಾಡಿದರು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ಈ ಯೋಜನೆಯ ತ್ವರಿತ ಪ್ರಗತಿಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರು ಮಾಹಿತಿ ಹಂಚಿಕೊAಡಿದ್ದಾರೆ.