ಕೂಡಿಗೆ, ಆ. ೧: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಗ್ರಾ.ಪಂ. ಅಧ್ಯಕ್ಷ ಕೆ.ಟಿ. ಗಿರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಮಳೆ ಹಿನ್ನೆಲೆ ಸೂಕ್ತ ಮುಂಜಾಗ್ರತೆ ವಹಿಸಲು ಸೂಚಿಸಲಾಯಿತು. ಶೇ. ೨೫ ರ ಅನುದಾನದಲ್ಲಿ ಪರಿಶಿಷ್ಟ ವರ್ಗದ ಸಂತ್ರಸ್ತರಿಗೆ ಪ್ಲಾಸ್ಟಿಕ್ ಟಾರ್ಪಲ್ ನೀಡುವುದು, ಕುಡಿಯುವ ನೀರು ಪೂರೈಕೆ ಸಮರ್ಪಕಗೊಳಿಸುವ ಸಂಬAಧ ಚರ್ಚಿಸಲಾಯಿತು.

ವಿವಿಧ ವಾರ್ಡ್ಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ನಿರ್ಧಾರ ಕೈಗೊಳ್ಳಲಾಯಿತು. ಅಧ್ಯಕ್ಷ ಕೆ.ಟಿ. ಗಿರೀಶ್ ಮಾತನಾಡಿದರು. ಅಭಿವೃದ್ಧಿ ಅಧಿಕಾರಿ ಮಂಜುಳಾ ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಗೆ ಬಂದ ಅರ್ಜಿಗಳ ಮಾಹಿತಿಯನ್ನು ಕಾರ್ಯದರ್ಶಿ ಪುನೀತ್ ಒದಗಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಟಿ.ಪಿ. ಹಮೀದ್, ಮಂಗಳ, ಮೋಹಿನಿ, ಅರುಣ್ ರಾವ್, ಕೆ.ಎಸ್. ಶಿವಕುಮಾರ್, ಅನಂತ, ವಾಣಿ, ಹೆಚ್.ಎಸ್. ರವಿ, ರತ್ನಮ್ಮ, ಪಲ್ಲವಿ, ಲಕ್ಷಿö್ಮ, ಚಂದ್ರು, ಜಯಶೀಲಾ ಹಾಜರಿದ್ದರು.