ಕುಶಾಲನಗರ, ಆ. ೧: ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಆಚರಿಸಲಾಯಿತು.

ಈ ಸಂದರ್ಭ ರಾಷ್ಟಿçÃಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ. ಭರತ್ ಮಾತನಾಡಿ, ಪ್ರತಿಯೊಬ್ಬರೂ ವೈಯಕ್ತಿಕ ಶುಚಿತ್ವದ ಬಗ್ಗೆ ಪರಿಸರ ಶುಚಿತ್ವದ ಬಗ್ಗೆ ರಕ್ತ ಹೀನತೆಯ ಬಗ್ಗೆ, ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂಗ್ಯೂ ಜ್ವರದ ಬಗ್ಗೆ ಡೆಂಗ್ಯೂ ಜ್ವರದ ಲಕ್ಷಣಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಅತಿಸಾರ ಭೇದಿ ನಿಯಂತ್ರಣಾ ಕಾರ್ಯಕ್ರಮದ ಬಗ್ಗೆಯು ಸಹ ತಿಳಿಸಿದರು.

ಸಂಚಾರಿ ಗಿರಿಜನ ಆರೋಗ್ಯ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ಧನ ರಾವ್ ಕದಂ ಮಾತನಾಡಿ, ಚಿಕೂನ್ ಗುನ್ಯಾ ಜ್ವರದ ಬಗ್ಗೆ ಹಾಗೂ ರಾಷ್ಟಿçÃಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ, ರಾಷ್ಟಿçÃಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ, ನಾಯಿ ಕಡಿತದ ಬಗ್ಗೆ ಹಾಗೂ ಹಾವು ಕಡಿತದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.

ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಸೌಮ್ಯ ಮಾತನಾಡಿ, ಎಲ್ಲಾ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ, ಪರಿಸರ ಸ್ವಚ್ಛತೆಯ ಬಗ್ಗೆ ನೀರಿನ ಸ್ವಚ್ಛತೆಯ ಬಗ್ಗೆ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಹಿರಿಯ ಫಾರ್ಮಸಿ ಅಧಿಕಾರಿ ಶಹನಾಜ್, ಈಶ್ವರಿ, ವೆನಿಲ್ಲಾ, ಸಮುದಾಯ ಆರೋಗ್ಯ ಅಧಿಕಾರಿ ರಾಕೇಶ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಸವನಹಳ್ಳಿಯ ಪ್ರಾಂಶುಪಾಲೆ ಶ್ರೀದೇವಿ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು, ಶಾಲೆಯ ವಿದ್ಯಾರ್ಥಿ - ವಿದ್ಯಾರ್ಥಿನಿಯರು ಇದ್ದರು.